Advertisement

ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 10ನೇ ವರ್ಷದ ಸ್ವಚ್ಛತಾ ಆಂದೋಲನ

ಗಾಂಧಿ ಜಯಂತಿ ಅಂಗವಾಗಿ ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿ ಸಂಘ ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ 10ನೇ ವರ್ಷದ ಸ್ವಚ್ಛತಾ ಆಂದೋಲನ ಶುಕ್ರವಾರ ನಡೆಯಿತು.

‘ಸ್ವಚ್ಛ ಭಾರತ–ಸುಂದರ ಭಾರತ’ ಆಶಯದೊಂದಿಗೆ ಬೆಳಿಗ್ಗೆ 8 ಗಂಟೆಯಿಂದ ಕಾಲೇಜು ಆವರಣ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಸ್ವಚ್ಛತಾ ಕಾರ್ಯವನ್ನು ಹಮ್ಮಿಕೊಳ್ಳಲಾಯಿತು. ಸ್ವಚ್ಛತೆಯ ಮಹತ್ವದ ಕುರಿತು ಜಾಗೃತಿ ಮೂಡಿಸುವ ಜೊತೆಗೆ ಸಾರ್ವಜನಿಕರಲ್ಲಿ ಪರಿಸರ ಸಂರಕ್ಷಣೆಯ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಆಂದೋಲನ ಆಯೋಜಿಸಲಾಗಿತ್ತು.

ಇದರ ಅಂಗವಾಗಿ ಮಕ್ಕಳಿಗಾಗಿ ‘ಸ್ವಚ್ಛತೆಯ ಬಗ್ಗೆ ಸಂಕಲ್ಪ’ ವಿಷಯದ ಕುರಿತು ಪ್ರಬಂಧ ಸ್ಪರ್ಧೆಯನ್ನೂ ಆಯೋಜಿಸಲಾಯಿತು. ವಿದ್ಯಾರ್ಥಿಗಳಲ್ಲಿ ಸ್ವಚ್ಛತೆಯ ಅರಿವು, ಪರಿಸರ ಸಂರಕ್ಷಣೆಯ ಕಾಳಜಿ ಹಾಗೂ ಸ್ವಚ್ಛ ಪರಿಸರ ನಿರ್ಮಾಣದ ಹೊಣೆಗಾರಿಕೆಯ ಮನೋಭಾವ ಬೆಳೆಸುವ ಉದ್ದೇಶದಿಂದ ಸ್ಪರ್ಧೆ ನಡೆಸಲಾಯಿತು.

ಹಳೆ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ

ನಂದ ಕಿಶೋರ್ ಕೆಮ್ಮಣ್ಣು ಮಾತನಾಡಿ, ಕಳೆದ 10 ವರ್ಷಗಳಿಂದ ಗಾಂಧಿ ಜಯಂತಿ ದಿನದಂದು ಸ್ವಚ್ಛತಾ ಅಭಿಯಾನವನ್ನು ನಡೆಸಿಕೊಂಡು ಬರುತ್ತಿದ್ದೇವೆ. ಈ‌ ಬಾರಿ 10ನೇ ವರ್ಷದ ಅಂಗವಾಗಿ ಕೋಡಿ ಬೇಂಗ್ರೆ ಶಾಲೆ, ಉರ್ದು ಶಾಲೆ, ಕಂಡಿಗೆ ಶಾಲೆ, ಬಡಾನಿಡಿಯೂರು ಶಾಲೆ ಹಾಗೂ ಕೆಳಾರ್ಕಳಬೆಟ್ಟು ಶಾಲೆಯ ಮಕ್ಕಳಿಗೆ ಸ್ವಚ್ಛತೆ ಬಗ್ಗೆ ಸಂಕಲ್ಪ ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿದೆ ಎಂದರು.

ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಸತೀಶ್ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಶ್ರೀ ತಾರನಾಥ್ ಪೂಜಾ ಶಾಲಾ ಅಭಿವೃದ್ಧಿ ಅಭಿವೃದ್ಧಿ ಸಮಿತಿಯ ಗೌರವಾಧ್ಯಕ್ಷರು ಶ್ರೀ ನರಸಿಂಹಮೂರ್ತಿ, ಶಾಲಾ ಅಭಿವೃದ್ಧಿ ಸಮಿತಿಯ

ಶ್ರೀ ಬಾಲಕೃಷ್ಣ ರಾವ್, ಶ್ರೀ ಯಾದವ ನಾಯಕ್ ಉಪಸ್ಥಿತರಿದ್ದರು.

KannadaExpress

Advertisement

ವಾರ್ತಾಪತ್ರಿಕೆ ಚಂದಾದಾರಿಕೆ

ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ

ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ
Get In Touch

Editor Kannada Express 1st Floor, Raaj Towers Udupi - 576101

Kannadaexpress@gmail.com

Follow Us
Advertisements

© 2025 KannadaExpress. All Rights Reserved.
Design by GreyCrust Solutions