ಹೈದರಾಬಾದ್: ಕಾರೊಂದು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ತೆಲಂಗಾಣದ ಚೆವೆಲ್ಲಾ ಸಮೀಪದ ಮಿರ್ಜಾಗುಡದಲ್ಲಿ ಗುರುವಾರ(ಜ.08) ಮುಂಜಾನೆ ಸಂಭವಿಸಿದೆ.
ಮೃತಪಟ್ಟವರು 18 ರಿಂದ 21 ವರ್ಷದೊಳಗಿನ ಬಿಬಿಎ ಮತ್ತು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ.
ಗುರುವಾರ ಮುಂಜಾನೆ ಸುಮಾರು 1:30ರ ಸುಮಾರಿಗೆ ಮೊಕಿಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ. ಗೆಳೆಯನ ಹುಟ್ಟುಹಬ್ಬದ ಪಾರ್ಟಿ ಮುಗಿಸಿ ವಾಪಸ್ ಆಗುತ್ತಿದ್ದಾಗ ಈ ಅವಘಡ ಸಂಭವಿಸಿದೆ.
ಕಾರು ಅತೀ ವೇಗದಲ್ಲಿದ್ದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಐವರ ಪೈಕಿ ನಾಲ್ವರು ಮೃತಪಟ್ಟಿದ್ದು, ಓರ್ವ ವಿದ್ಯಾರ್ಥಿನಿ ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಅತಿಯಾದ ವೇಗವೇ ಈ ದುರಂತಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಘಟನಾಸ್ಥಳಕ್ಕೆ ಧಾವಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲEditor Kannada Express 1st Floor, Raaj Towers Udupi - 576101
+919008424891
Kannadaexpress@gmail.com
© 2025 KannadaExpress. All Rights Reserved.
Design by GreyCrust Solutions