ತಲಪಾಡಿ ಟೋಲ್ ಗೇಟ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 5 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ಕೆಸಿ ರೋಡ್‌ನಿಂದ ಬರುತ್ತಿದ್ದ ರಿಕ್ಷಾ ಮತ್ತು ಬಸ್ ಮಧ್ಯೆ ಅಪಘಾತ ನಡೆದಿದ್ದು, ರಿಕ್ಷಾದಲ್ಲಿದ್ದ ಕೆಸಿ ರೋಡ್ ಮೂಲದವರೆನ್ನಲಾದ ಐವರು ಮೃತಪಟ್ಟಿದ್ದಾರೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಮೃತರಲ್ಲಿ ನಾಲ್ವರು ಮಹಿಳೆಯರು ಮತ್ತು ಮಗು ಸೇರಿದೆ ಎನ್ನಲಾಗುತ್ತಿದೆ. ರಿಕ್ಷಾ ಚಾಲಕ ಗಂಭೀರ ಗಾಯಗೊಂಡಿದ್ದಾರೆ. ಕಾಸರಗೋಡು ಜಿಲ್ಲೆಯ ಮಂಜೇಶ್ವರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ ಎಂದು ಸ್ಥಳೀಯರು ಮಾಹಿತಿ ನೀಡಿದರು.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ© 2025 KannadaExpress. All Rights Reserved.
Design by GreyCrust Solutions