Advertisement

ಪುಣೆ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ: ಬೆಳಗಾವಿಯ ನಾಲ್ವರ ದುರ್ಮ*ರಣ

ಪುಣೆ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಹಾರಾಷ್ಟ್ರದ ಸಾತಾರಾ ಸಮೀಪ ಭಾನುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಳಗಾವಿ ಜಿಲ್ಲೆಯ ನಾಲ್ವರು ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ.

ಮೃತರಲ್ಲಿ ಸಂಕೇಶ್ವರದ ಖ್ಯಾತ ವೈದ್ಯರಾದ ಡಾ. ಸಚಿನ್ ಶಂಕರಗೌಡ ಪಾಟೀಲ್ ಅವರು ಸೇರಿದ್ದಾರೆ ಎಂದು ತಿಳಿದುಬಂದಿದೆ. ಅಪಘಾತದ ತೀವ್ರತೆಯಿಂದ ವಾಹನ ಸಂಪೂರ್ಣವಾಗಿ ಜಖಂಗೊಂಡಿದ್ದು, ಸ್ಥಳದಲ್ಲೇ ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇತರ ಮೃತರ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದ್ದು, ಗಾಯಾಳುಗಳಿದ್ದಾರೆಯೇ ಎಂಬುದೂ ಸ್ಪಷ್ಟವಾಗಿಲ್ಲ.

ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

KannadaExpress

Advertisement

ವಾರ್ತಾಪತ್ರಿಕೆ ಚಂದಾದಾರಿಕೆ

ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ

ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ
Get In Touch

Editor Kannada Express 1st Floor, Raaj Towers Udupi - 576101

+919008424891

Kannadaexpress@gmail.com

Follow Us
Advertisements

© 2025 KannadaExpress. All Rights Reserved.
Design by GreyCrust Solutions