ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು, ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹೈಕೋರ್ಟ್ ನ ಹಿರಿಯ ನ್ಯಾಯವಾದಿ ದೊರೆ ರಾಜು ಶನಿವಾರ ಹಾಜರಾಗಲಿದ್ದಾರೆ.
ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿರುವ 39/25 ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯದಲ್ಲಿ ವಾದ ಮಂಡಿಸುವುದಕ್ಕಾಗಿ ದೊರೆ ರಾಜು ಬೆಳ್ತಂಗಡಿಗೆ ಆಗಮಿಸಿದ್ದಾರೆ.
ಧರ್ಮಸ್ಥಳ ಪ್ರಕರಣದಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಎಸ್.ಐ.ಟಿ. ವರದಿ ಸಲ್ಲಿಸಿದ್ದು, ಅದರಲ್ಲಿ ಸೌಜನ್ಯಾ ಪರ ಹೋರಾಟಗಾರರಾದ ಮಹೇಶ್ ಶೆಟ್ಟಿ ತಿರೋಡಿ ಹಾಗೂ ಇತರರನ್ನು ಆರೋಪಿಗಳಾಗಿಸಲು ಅನುಮತಿ ನೀಡುವಂತೆ ಕೇಳಿಕೊಂಡಿದೆ. ಈ ಬಗ್ಗೆ ವಿಚಾರಣೆ ನಡೆಯುತ್ತಿದೆ.
ಈ ಪ್ರಕರಣದಲ್ಲಿ ಜಯಂತ್ ಟಿ., ಮಹೇಶ್ ಶೆಟ್ಟಿ ಹಾಗೂ ಇತರ ಹೋರಾಟಗಾರರ ಪರವಾಗಿ ವಾದ ಮಂಡಿಸಲು ಹಿರಿಯ ನ್ಯಾಯವಾದಿ ದೊರೆ ರಾಜು ಅವರು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗುತ್ತಿದ್ದಾರೆ.
ಈ ಹಿಂದೆ ಎಸ್.ಐ.ಟಿ. ಸಲ್ಲಿಸಿದ್ದ ವರದಿಯ ಪ್ರತಿಯನ್ನು ಪಡೆಯಲು ಜಯಂತ್ ಟಿ. ಅವರ ಪರವಾಗಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿ ವಾದ ಮಂಡಿಸಿದ್ದ ದೊರೆ ರಾಜು ಆ ವರದಿಯ ಪ್ರತಿಯನ್ನು ಪಡೆದಿದ್ದರು. ಇದೀಗ ಆ ವರದಿಯ ಆಧಾರದಲ್ಲಿ ಅವರು ನ್ಯಾಯಾಲಯದ ಮುಂದೆ ವಾದ ಮಂಡಿಸಲಿದ್ದಾರೆ ಎಂದು ತಿಳಿದುಬಂದಿದೆ.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲEditor Kannada Express 1st Floor, Raaj Towers Udupi - 576101
+919008424891
Kannadaexpress@gmail.com
© 2025 KannadaExpress. All Rights Reserved.
Design by GreyCrust Solutions