ಕೋಟ: ಬ್ರಹ್ಮಾವರ ತಾಲೂಕಿನ ಮೂಡುಗಿಳಿಯಾರು ಗ್ರಾಮದ ದಲಿತ ಪತ್ರಕರ್ತೆ ಆರತಿ ಗಿಳಿಯಾರು (31) ಅವರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರತಿ ಗಿಳಿಯಾರು ಅವರು ನ್ಯೂಸ್ ದಿನ ಪತ್ರಿಕೆಯ ಉಪಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದು, ಏಪ್ರಿಲ್ 15, 2026ರಂದು ವಡ್ಡರ್ಸೆ ಗ್ರಾಮದಲ್ಲಿರುವ ಸುಮಾರು 1 ಎಕರೆ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿ ಶೆಡ್ ನಿರ್ಮಿಸಲಾಗುತ್ತಿದೆ ಎಂಬ ಮಾಹಿತಿಯ ಮೇರೆಗೆ ಸ್ಥಳಕ್ಕೆ ತೆರಳಿದ್ದರು. ಈ ವೇಳೆ ಮಧ್ಯಾಹ್ನ ಸುಮಾರು 1.00ರಿಂದ 1.15ರ ಅವಧಿಯಲ್ಲಿ ರಸ್ತೆಬದಿಯಲ್ಲಿ ನಿಂತು ಜಿಪಿಎಸ್ ಫೋಟೋಗಳನ್ನು ತೆಗೆಯುತ್ತಾ ವರದಿ ಸಿದ್ಧಪಡಿಸುತ್ತಿದ್ದಾಗ ಘಟನೆ ಸಂಭವಿಸಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಈ ಸಂದರ್ಭ ಆರೋಪಿತರಾದ ಪ್ರಣುತ್ ಗಾಣಿಗ, ಅವರ ಚಿಕ್ಕಮ್ಮ ಹಾಗೂ ಇತರ ಸಹಚರರು ಪತ್ರಕರ್ತೆಯ ಮೇಲೆ ಹಲ್ಲೆ ನಡೆಸಿ ಅವಮಾನಗೊಳಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಸಂಬಂಧ ಕೋಟ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 66/2026ರಡಿ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 352, 351(2) ಹಾಗೂ 3(5) ಜೊತೆಗೆ ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ಅತ್ಯಾಚಾರ ತಡೆ) ಕಾಯ್ದೆಯ 3(1)(r), 3(1)(s) ಕಲಂಗಳಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲEditor Kannada Express 1st Floor, Raaj Towers Udupi - 576101
+919008424891
Kannadaexpress@gmail.com
© 2025 KannadaExpress. All Rights Reserved.
Design by GreyCrust Solutions