ಶಿವಮೊಗ್ಗ: ಅಮೆರಿಕಾವು ಇರಾನ್ ಮೇಲೆ ನಡೆಸಿರುವ ದಾಳಿ ಅನಗತ್ಯ ಹಾಗೂ ಖಂಡನೀಯ ಎಂದು ಮುಖ್ಯಮಂತ್ರಿ Siddaramaiah ಹೇಳಿದರು.
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಒಂದೆಡೆ ಶಾಂತಿಯ ಮಾತುಗಳನ್ನಾಡುವ ಅಮೆರಿಕಾ ಮತ್ತೊಂದೆಡೆ ಯುದ್ಧ ನಡೆಸುತ್ತಿರುವುದು ತದ್ವಿರುದ್ಧ ನಿಲುವಾಗಿದೆ ಎಂದು ಆಕ್ಷೇಪಿಸಿದರು. ಇರಾನ್‌ನ ಸರ್ವೋಚ್ಚ ನಾಯಕ Ayatollah Ali Khamenei ಹತ್ಯೆಗೀಡಾಗಿರುವುದು ದುಃಖಕರ ಸಂಗತಿ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದರು.
ರಾಜ್ಯ ಸರ್ಕಾರವು ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು. ಅರಬ್ ದೇಶಗಳಲ್ಲಿ ಸಿಲುಕಿರುವ ಬಳ್ಳಾರಿಯ ಸುಮಾರು 30 ಜನರನ್ನು ಸಹ ವಾಪಸ್ಸು ಕರೆತರಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ದುಬೈನಲ್ಲಿ ಇರುವ ಭಾರತೀಯರು ಸುರಕ್ಷಿತವಾಗಿದ್ದಾರೆ. ಅರಬ್ ದೇಶಗಳಲ್ಲಿ ವಾಸಿಸುತ್ತಿರುವ ಕನ್ನಡಿಗರ ಸುರಕ್ಷತೆಯ ಕುರಿತು ಮುಖ್ಯ ಕಾರ್ಯದರ್ಶಿ ಹಾಗೂ ಸ್ಥಾನಿಕ ಆಯುಕ್ತರೊಂದಿಗೆ ಚರ್ಚಿಸಲಾಗಿದೆ. ದುಬೈ ವಿಮಾನ ನಿಲ್ದಾಣ ತಾತ್ಕಾಲಿಕವಾಗಿ ಬಂದ್ ಮಾಡಲಾಗಿದ್ದು, ಅದು ಪುನಃ ಆರಂಭವಾದ ಬಳಿಕ ಅವರನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರಲು ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ಭೋಜೇಗೌಡರು ದುಬೈನಲ್ಲಿ ಇದ್ದು, ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದೇನೆ. ಅವರು ಹೋಟೆಲ್‌ನಲ್ಲಿ ಸುರಕ್ಷಿತವಾಗಿರುವುದಾಗಿ ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿ ಮಾಹಿತಿ ನೀಡಿದರು.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲEditor Kannada Express 1st Floor, Raaj Towers Udupi - 576101
+919008424891
Kannadaexpress@gmail.com
© 2025 KannadaExpress. All Rights Reserved.
Design by GreyCrust Solutions