Advertisement

ವಂದೇ ಮಾತರಂ ಕೋಸ್ಟಲ್ ಸೈಕ್ಲೋಥಾನ್ ನಿಂದ ಕಡಲ ಭದ್ರತೆ ಬಗ್ಗೆ ಜಾಗೃತಿ: ಸಂದೀಪ್ ಚಕ್ರವರ್ತಿ

"ಸುರಕ್ಷಿತ ತಟ್, ಸಮೃದ್ಧ ಭಾರತ್" (ಸುರಕ್ಷಿತ ಕರಾವಳಿ, ಸಮೃದ್ಧ ಭಾರತ) ವಿಷಯದ ಮೇಲೆ ಕೇಂದ್ರಿತ ಸಿಐಎಸ್‌ಎಫ್-ವಂದೇ ಮಾತರಂ ಕೋಸ್ಟಲ್ ಸೈಕ್ಲೋಥಾನ್ 2026 ಅನ್ನು ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯು ಆಯೋಜಿಸಿದ್ದು ಇದು ಬೃಹತ್ ರಾಷ್ಟ್ರೀಯ ಜಾಗೃತಿ ಅಭಿಯಾನವಾಗಿದೆ. ಅಭಿಯಾನ ಜನವರಿ 28 ರಂದು ಪ್ರಾರಂಭವಾಗಿ ಫೆಬ್ರವರಿ 22 ರವರೆಗೆ ನಡೆಯಲಿದ್ದು 6,553 ಕಿ.ಮೀ.ಗೂ ಹೆಚ್ಚು ದೂರದ ಈ ಸೈಕಲ್ ಯಾತ್ರೆ, ಕರಾವಳಿ ತೀರದ ಭದ್ರತೆ, ದೇಶಭಕ್ತಿ ಮತ್ತು "ವಂದೇ ಮಾತರಂ" ಗೀತೆಯ 150 ನೇ ವರ್ಷವನ್ನು ಆಚರಿಸಲು ಗುಜರಾತ್‌ನ ಲಖ್‌ಪತ್‌ನಿಂದ ಪಶ್ಚಿಮ ಬಂಗಾಳದ ಬಕ್ಖಾಲಿಯವರೆಗೆ ಸಾಗಲಿದೆ ಎಂದು ಸಿಐಎಸ್‌ಎಫ್ ಉಪ ಕಮಾಂಡೆAಟ್ ಸಂದೀಪ್ ಚಕ್ರವರ್ತಿ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಹಯೋಗದಲ್ಲಿ ಬ್ರಹ್ಮಾವರದ ಆಶ್ರಯ ಹೋಟೆಲ್‌ನ ಸಭಾಂಗಣದಲ್ಲಿ ನಡೆದ ಸಂವಾದ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.

25 ದಿನಗಳ ಸೈಕ್ಲೋಥಾನ್‌ನಲ್ಲಿ ಒಟ್ಟು 130 ಸೈಕ್ಲಿಸ್ಟ್ಗಳು ಭಾಗವಹಿಸಿದ್ದು ಇದರಲ್ಲಿ 65 ಜನ ಮಹಿಳೆಯರು ಭಾಗವಹಿಸಿ ಕರಾವಳಿ ತೀರಗಳ ರಕ್ಷಣೆಯ ಜೊತೆಗೆ ಮಹಿಳಾ ಸಶಕ್ತೀಕರಣದ ಸಂದೇಶವನ್ನು ನೀಡುತ್ತಿದ್ದಾರೆ. ಮುಖ್ಯವಾಗಿ ದೇಶದ ಕರಾವಳಿ ತೀರದ ಜನರ ಜೊತೆ ಬೆರೆತು ಅವರ ಆಚಾರ ವಿಚಾರಗಳನ್ನು ಅರಿಯುವ ಜೊತೆಗೆ ಅವರಿಗೆ ಕಡಲ ಭದ್ರತೆಯ ಬಗ್ಗೆ ಮಾಹಿತಿ ನೀಡಿ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಈ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಕರ್ನಾಟಕದಲ್ಲಿ ಇದುವರೆಗೆ ಭೇಟಿ ನೀಡಿದ ಕಡೆಗಳಲ್ಲಿ ಜನರಿಂದ ಅತ್ಯುತ್ತಮ ಸ್ಪಂದನೆ ದೊರೆತಿದ್ದು ಜಾಗೃತಿ ಕಾರ್ಯವು ಯಶಸ್ಸನ್ನು ಕಾಣುತ್ತಿದೆ. ಕಾರ್ಯಕ್ರಮವು ಕೇರಳದ ಕೊಚ್ಚಿಯಲ್ಲಿ ಸಂಪನ್ನವಾಗಲಿದೆ ಎಂದರು.

ರ‍್ಯಾಲಿಯು ಇಂದು ಬೆಳಗ್ಗೆ ತ್ರಾಸಿ ಪ್ರವೇಶಿಸಿದ್ದು, ಸ್ಥಳೀಯ ಸಂಪ್ರದಾಯದೊAದಿಗೆ ಸ್ವಾಗತಿಸಲಾಯಿತು. ಅಲ್ಲಿನ ವಿದ್ಯಾರ್ಥಿ ಹಾಗೂ ಸಮುದಾಯದ ಜನರೊಂದಿಗೆ ಸಂವಾದ ನಡೆಸಿ, ಕುಂದಾಪುರ ಮೂಲಕ ಬ್ರಹ್ಮಾವರ ತಲುಪಿತು. ಆ ಬಳಿಕ ಉಡುಪಿ ಮಾರ್ಗವಾಗಿ ಕಾಪುವಿನ ಸರಕಾರಿ ಕಾಲೇಜಿನಲ್ಲಿ ಸಂವಾದ ಕಾರ್ಯಕ್ರಮ ನಡೆಸಿ ಹೆಜಮಾಡಿ ಮೂಲಕ ಮಂಗಳೂರಿಗೆ ತಲುಪಿತು.

ಕಾರ್ಯಕ್ರಮದಲ್ಲಿ ಸಿಐಎಸ್‌ಎಫ್ ಸಹಾಯಕ ಕಮಾಂಡೆAಟ್ ದುರ್ಗೇಶ್ ಕಲಾಲ್, ಸಿಎಂಓ ಭುವನೇಶ್ ಜಾಧವ್, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೋಷನ್ ಶೆಟ್ಟಿ, ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಬಿಜು ನಾಯ್ಕ, ಉಪಾಧ್ಯಕ್ಷ ಸುದೇಶ್ ಹೆಗ್ಡೆ, ಕಾರ್ಯದರ್ಶಿ ಗ್ರೆಗೋರಿ ಡಿಸೋಜ, ಉದ್ಯಮಿ ರಾಜಾರಾಮ್ ಶೆಟ್ಟಿ ಉಪಸ್ಥಿತರಿದ್ದರು. ಅವಿನಾಶ್ ಕಾಮತ್ ಕಾರ್ಯಕ್ರಮ ನಿರೂಪಿಸಿದರು.

KannadaExpress

Advertisement

ವಾರ್ತಾಪತ್ರಿಕೆ ಚಂದಾದಾರಿಕೆ

ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ

ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ
Get In Touch

Editor Kannada Express 1st Floor, Raaj Towers Udupi - 576101

+919008424891

Kannadaexpress@gmail.com

Follow Us
Advertisements

© 2025 KannadaExpress. All Rights Reserved.
Design by GreyCrust Solutions