Advertisement

ಶಿಕ್ಷಣಕ್ಕೆ ಬಡಗಬೆಟ್ಟು ಸೊಸೈಟಿಯ ಬೆಂಬಲ; ವಿದ್ಯಾರ್ಥಿಗಳಿಗೆ ಉಚಿತ ಶೈಕ್ಷಣಿಕ ಪರಿಕರ ವಿತರಣೆ

ಭಾರತದಲ್ಲಿ ಸಹಕಾರಿ ಕ್ಷೇತ್ರವು ವಾಣಿಜ್ಯ ಬ್ಯಾಂಕ್‌ಗಳಿಗೆ ಸಮಾನಾಂತರವಾಗಿ ಕಾರ್ಯನಿರ್ವಹಿಸುತ್ತಿದ್ದು, ಕರ್ನಾಟಕದ ಅಭಿವೃದ್ಧಿ ಹಾಗೂ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ ಎಂದು ಭಾರತ ಸ್ಕೌಟ್ಸ್ ಆಂಡ್ ಗೈಡ್ಸ್ ರಾಜ್ಯ ಪ್ರಧಾನ ಆಯುಕ್ತ ಹಾಗೂ ಮಾಜಿ ಸಚಿವ ಪಿ.ಜಿ.ಆರ್. ಸಿಂಧ್ಯಾ ಹೇಳಿದರು.

ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ವತಿಯಿಂದ ಉಡುಪಿ ಪುರಭವನದಲ್ಲಿ ಶನಿವಾರ ಆಯೋಜಿಸಲಾದ ಉಡುಪಿ ಜಿಲ್ಲೆಯ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ, ಶೈಕ್ಷಣಿಕ ಪರಿಕರಗಳ ವಿತರಣೆ, ಪ್ರತಿಭಾ ಪುರಸ್ಕಾರ ಸಮಾರಂಭ ಹಾಗೂ ಸಸಿ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಡುಪಿ ಶಾಸಕ ಯಶ್‌ಪಾಲ್ ಎ. ಸುವರ್ಣ, ಉಡುಪಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಂಶುಪಾಲ ಅಶೋಕ್ ಕಾಮತ್ ಹಾಗೂ ಕುಂದಾಪುರ ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕ ಸುಧೀರ್ ಕುಮಾರ್ ಜೆ. ಭಾಗವಹಿಸಿ ಮಾತನಾಡಿದರು. ವಿದ್ವಾನ್ ದಾಮೋದರ್ ಶರ್ಮ ಬಾರಕೂರು ವಿಶೇಷ ಉಪನ್ಯಾಸ ನೀಡಿದರು.

2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಜಿಲ್ಲೆಯ ಕನ್ನಡ ಮಾಧ್ಯಮ ಶಾಲೆಗಳ 24 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಒಟ್ಟು 5 ಲಕ್ಷ ರೂ.ಕ್ಕೂ ಅಧಿಕ ಸಹಾಯಧನ ಹಾಗೂ ಪ್ರತಿಭಾ ಪುರಸ್ಕಾರಗಳನ್ನು ವಿತರಿಸಲಾಯಿತು.

ಇದೇ ಸಂದರ್ಭದಲ್ಲಿ ಜಿಲ್ಲೆಯ 45 ಕನ್ನಡ ಮಾಧ್ಯಮ ಶಾಲೆಗಳಿಗೆ ಉಚಿತ ನೋಟ್ ಪುಸ್ತಕಗಳು, 8 ಶಾಲೆಗಳಿಗೆ ಸಮವಸ್ತ್ರಗಳು, ಆರು ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ಹಾಗೂ ಕಲಿಕೋಪಕರಣಗಳನ್ನು ವಿತರಿಸಲಾಯಿತು. ಉಡುಪಿ ಕ್ರಿಶ್ಚಿಯನ್ ಪದವಿ ಪೂರ್ವ ಕಾಲೇಜಿಗೆ ಕಂಪ್ಯೂಟರ್ ವ್ಯವಸ್ಥೆಯನ್ನು ಕೊಡುಗೆಯಾಗಿ ನೀಡಲಾಯಿತು. ಶಾಲಾ ಶಿಕ್ಷಕರಿಗೆ ಕೊಡೆಗಳನ್ನೂ ವಿತರಿಸಲಾಯಿತು.

ಸೊಸೈಟಿಯ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಅಧ್ಯಕ್ಷತೆ ವಹಿಸಿ ಸ್ವಾಗತಿಸಿದರು. ಸೊಸೈಟಿಯ ನಿರ್ದೇಶಕರಾದ ಪುರುಷೋತ್ತಮ ಶೆಟ್ಟಿ, ಮನೋಹರ್ ಶೆಟ್ಟಿ, ಉಮಾನಾಥ್, ಜಯ ಶೆಟ್ಟಿ, ಗಾಯತ್ರಿ ಭಟ್, ಪ್ರಧಾನ ವ್ಯವಸ್ಥಾಪಕ ರಾಜೇಶ್ ವಿ. ಶೇರಿಗಾರ್ ಹಾಗೂ ಸಹಾಯಕ ವ್ಯವಸ್ಥಾಪಕ ಪ್ರವೀಣ್ ಕುಮಾರ್ ಉಪಸ್ಥಿತರಿದ್ದರು. ಮಲ್ಪೆ ಶಾಖಾ ವ್ಯವಸ್ಥಾಪಕ ನವೀನ್ ಕೆ. ಮತ್ತು ಕುಂದಾಪುರ ಶಾಖಾ ವ್ಯವಸ್ಥಾಪಕ ಸಮರ್ಥ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

KannadaExpress

Advertisement

ವಾರ್ತಾಪತ್ರಿಕೆ ಚಂದಾದಾರಿಕೆ

ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ

ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ
Get In Touch

Editor Kannada Express 1st Floor, Raaj Towers Udupi - 576101

+919008424891

Kannadaexpress@gmail.com

Follow Us
Advertisements

© 2025 KannadaExpress. All Rights Reserved.
Design by GreyCrust Solutions