Advertisement

"ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಸೂಕ್ತ ಆಯ್ಕೆ" - ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು ದಸರಾ ಉದ್ಘಾಟಕರ ಆಯ್ಕೆಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ಸಮಿತಿಯಲ್ಲಿ ನನಗೆ ಅಧಿಕಾರ ನೀಡಲಾಗಿತ್ತು. ಬೂಕರ್ ಪ್ರಶಸ್ತಿ ವಿಜೇತರಾದ ಬಾನು ಮುಷ್ತಾಕ್ ಅವರಿಗೆ ದಸರಾ ಉದ್ಘಾಟನೆಗೆ ಅವಕಾಶ ನೀಡಬೇಕೆಂದು ತೀರ್ಮಾನಿಸಲಾಯಿತು. ಹಿಂದೆಯೂ ಕವಿ ನಿಸಾರ್ ಅಹಮದ್ ಅವರು ದಸರಾ ಉದ್ಘಾಟಿಸಿದ್ದಾರೆ. ದಸರಾ ನಾಡ ಹಬ್ಬ, ಸಾಂಸ್ಕೃತಿಕ ಆಚರಣೆಯಾಗಿದೆ. ನಾಡ ಹಬ್ಬವನ್ನು ಇಂಥ ಧರ್ಮದವರೇ ಉದ್ಘಾಟಿಸಬೇಕೆಂದು ಇಲ್ಲ. ನಾಡ ಹಬ್ಬ ಎಲ್ಲರಿಗೂ ಹಬ್ಬವೇ. ಹಿಂದೂ, ಕ್ರಿಶ್ಚಿಯನ್, ಬೌದ್ಧ, ಜೈನರಿಗೂ ಇದು ಹಬ್ಬ. ಮಹಾರಾಜರ ಆಡಳಿತ ಇಲ್ಲದಿರುವಾಗ ಹೈದರಾಲಿ, ಟಿಪ್ಪು ಸುಲ್ತಾನ್ ಕೂಡ ದಸರಾ ಆಚರಿಸುತ್ತಿದ್ದರು. ದಿವಾನರಾಗಿದ್ದ ಮಿರ್ಜಾ ಇಸ್ಮಾಯಿಲ್ ಅವರು ದಸರಾ ಆಚರಿಸಿದ್ದಾರೆ. ಇದೊಂದು ಧರ್ಮಾತೀತ, ಜಾತ್ಯಾತೀತ ಹಬ್ಬ. ಕರ್ನಾಟಕದಲ್ಲಿ ಬೂಕರ್ ಪ್ರಶಸ್ತಿ ಪಡೆದ ಸಾಹಿತಿಗಳು ಬಹಳ ಕಡಿಮೆ. ಬಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟಕರಾಗಿ ಆಯ್ಕೆ ಮಾಡಿರುವ ಬಗ್ಗೆ ಧರ್ಮಾಂಧರು ಮಾತ್ರ ಮಾತನಾಡುತ್ತಾರೆ. ಅವರಿಗೆ ಇತಿಹಾಸ ತಿಳಿದಿಲ್ಲ, ಇತಿಹಾಸವನ್ನು ತಿಳಿದುಕೊಳ್ಳುವುದು ಒಳ್ಳೆಯದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದ ಜೊತೆ ಮಾತನಾಡಿ, ಬಿಜೆಪಿಯವರು ರಾಜಕೀಯವಾಗಿ ಮಾತನಾಡುತ್ತಾರೆಯೇ ಹೊರತಾಗಿ ಜಾತ್ಯಾತೀತವಾಗಿ ಮಾತನಾಡುವುದಿಲ್ಲ. ಬಾನು ಮುಷ್ತಾಕ್ ಅವರಿಗೆ ಕನ್ನಡ ತಾಯಿಯ ಬಗ್ಗೆ ಗೌರವ, ಅಭಿಮಾನ, ಪ್ರೀತಿ ಇಲ್ಲದೆ ಇದ್ದರೆ ಕನ್ನಡದಲ್ಲಿ ಬರೆಯುತ್ತಾರೆಯೇ? ಬಿಜೆಪಿಯವರು ಕುಂಟು ನೆಪವನ್ನು ಹುಡುಕುತ್ತಿದ್ದಾರೆ. ಎದೆಯ ಹಣತೆ ಕೃತಿಯನ್ನು ಭಾಷಾಂತರ ಮಾಡಿದ ದೀಪಾ ಭಾಸ್ತಿಯವರನ್ನೂ ನಾವು ಮರೆತಿಲ್ಲ. ಸರ್ಕಾರ ಈಗಾಗಲೇ ದೀಪಾ ಭಾಸ್ತಿ ಹಾಗೂ ಬಾನು ಮುಷ್ತಾಕ್ ಅವರಿಗೆ ತಲಾ ಹತ್ತು ಲಕ್ಷ ರೂ.ಗಳನ್ನು ನೀಡಿ, ಸನ್ಮಾನಿಸಿ, ಗೌರವಿಸಿದ್ದೇವೆ ಎಂದು ಹೇಳಿದರು.

KannadaExpress

Advertisement

ವಾರ್ತಾಪತ್ರಿಕೆ ಚಂದಾದಾರಿಕೆ

ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ

ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ
Get In Touch

Udupi

9985974521

Kannadaexpress@gmail.com

Follow Us
Advertisements

© 2025 KannadaExpress. All Rights Reserved.
Design by GreyCrust Solutions