ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್ ಅವರು ಆಯ್ಕೆಯಾಗಿರುವುದಕ್ಕೆ ಇದೀಗ ವಿರೋಧ ವ್ಯಕ್ತವಾಗುತ್ತಿದೆ. ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಬಿಜೆಪಿ ನಾಯಕರು ಭಾನು ಮುಷ್ತಾಕ್ ಆಯ್ಕೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಸಲ್ಲಿಸಿ ದೀಪ ಬೆಳಗುವುದರ ಮೂಲಕ ದಸರಾವನ್ನು ಉದ್ಘಾಟಿಸಬೇಕು. ಭಾನು ಅವರು ಮುಸ್ಲಿಂ ಆಗಿರುವುದರಿಂದ ಅವರ ಸ್ವಂತ ಧಾರ್ಮಿಕ ನಂಬಿಕೆಗಳಿಗೆ ವಿರುದ್ಧವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಮತ್ತೊಂದೆಡೆ ಪ್ರತಾಪ್ ಸಿಂಹ ಮಾತನಾಡಿ, ಇಸ್ಲಾಂ ಅಲ್ಲಾ ಬಿಟ್ಟರೆ ಬೇರೆ ಯಾರೂ ದೇವರಿಲ್ಲ ಎನ್ನುತ್ತದೆ . ಹಾಗಾದರೆ ಬಾನು ಮುಷ್ತಾಕ್ ಹೇಗೆ ತಾಯಿ ಚಾಮುಂಡಿಯನ್ನು ದೇವರು ಎಂದು ಒಪ್ಪಿಕೊಳ್ಳುತ್ತಾರೆ. ಅವರ ಧರ್ಮ ಅವರ ಮಾತನ್ನು ಒಪ್ಪುತ್ತಾ ಎಂದು ಪ್ರಶ್ನಿಸಿದರು. ಇನ್ನು ಬಾನು ಮುಷ್ತಾಕ್ ಬೂಕರ್ ಪ್ರಶಸ್ತಿ ಪಡೆದಿರುವುದಕ್ಕೆ ಅವರನ್ನು ಮುಂದಿನ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷೆ ಮಾಡಿ, ಆದರೆ ಧಾರ್ಮಿಕ ನಂಬಿಕೆ ಮತ್ತು ಆಚರಣೆಯ ಪ್ರತೀಕವಾಗಿರುವ ದಸರಾ ಉದ್ಘಾಟನೆಗೆ ಕರೆಯುವುದು ಸೂಕ್ತವಲ್ಲ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ. ಈ ಬಗ್ಗೆ ಸಿಟಿ ರವಿ ಸಹ ಮಾತನಾಡಿದ್ದು ಚಾಮುಂಡಿ ತಾಯಿ ಮೇಲೆ ನಂಬಿಕೆ, ಭಕ್ತಿ ಇದ್ದರೆ ಅವರು ಉದ್ಘಾಟಿಸುತ್ತಾರೆ ಈ ಬಗ್ಗೆ ನಾನೇನು ಕಮೆಂಟ್ ಮಾಡುವುದಿಲ್ಲ ಎಂದು ಹೇಳಿದ್ದಾರೆ.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ© 2025 KannadaExpress. All Rights Reserved.
Design by GreyCrust Solutions