ಅನನ್ಯ ಭಟ್ ನಾಪತ್ತೆ ಪ್ರಕರಣದ ಸಂಬಂಧಿಸಿದಂತೆ 3ನೇ ದಿನದ ವಿಚಾರಣೆಗಾಗಿ ತಾಯಿ ಸುಜಾತ ಭಟ್ ಆ.28 ರಂದು ಬೆಳಗ್ಗೆ 10 ಗಂಟೆಗೆ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ವಿಚಾರಣೆಗಾಗಿ ಹಾಜರಾಗಿದ್ದಾರೆ. ನಿನ್ನೆ ಆ.27 ರ ಬುಧವಾರ ಬೆಳಗ್ಗೆ10 ಗಂಟೆಯಿಂದ ರಾತ್ರಿ 9:30 ರವರೆಗೆ ಸುಜಾತ ಭಟ್ ಅವರ 2ನೇ ದಿನದ ವಿಚಾರಣೆ ನಡೆದಿತ್ತು.
ಸತತ 3 ದಿನಗಳಿಂದ ಎಸ್.ಐ.ಟಿ. ತಂಡ ಪ್ರಶ್ನೆಗಳ ಮೇಲೆ ಪ್ರಶ್ನೆ ಕೇಳುತ್ತಿದ್ದು, ಇದರಿಂದ ಬೇಸತ್ತ ಸುಜಾತ ಭಟ್ ತನಿಖೆ ವೇಳೆ ದೂರು ಹಿಂಪಡೆಯುವುದಾಗಿ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಇದಕ್ಕೆ ಒಪ್ಪದ ಎಸ್ಐಟಿ ತಂಡ ವಿಚಾರಣೆ ನಡೆಸಿ, ಹೇಳಿಕೆ ಪಡೆಯುತ್ತಿದೆ.
ವಿಚಾರಣೆ ವೇಳೆ ಎಸ್ಐಟಿ ಅಧಿಕಾರಿಗಳು, ಸುಳ್ಳು ಪ್ರಕರಣ ದಾಖಲಿಸಿರುವ ಉದ್ದೇಶ, ಇದಕ್ಕೆ ಪ್ರೇರಣೆ, ಸಹಕರಿಸದವರ ಮಾಹಿತಿ ಪಡೆಯುತ್ತಿದ್ದಾರೆ ಹಾಗೂ ಸುಜಾತಾ ಭಟ್ ಅವರ ಆದಾಯ, ಆಶ್ರಯ, ಪೂರ್ವಾಪರ ಕುರಿತು ಪ್ರಶ್ನಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ© 2025 KannadaExpress. All Rights Reserved.
Design by GreyCrust Solutions