ಮೈಸೂರು: ಬಿಜೆಪಿ ಆಡಳಿತದಲ್ಲಿದ್ದ ಸಂದರ್ಭದಲ್ಲಿ ಯಾವುದೇ ಗಮನಾರ್ಹ ಕೆಲಸಗಳನ್ನು ಮಾಡದೇ ಇದ್ದವರು, ಈಗ ವಿರೋಧ ಪಕ್ಷದಲ್ಲಿದ್ದು ಕೇವಲ ಪ್ರತಿಭಟನೆ ನಡೆಸುವುದರಲ್ಲಿ ಮಾತ್ರ ನಿರತರಾಗಿದ್ದಾರೆ ಎಂದು ಸರ್ಕಾರದ ವಿರುದ್ಧ ಬಿಜೆಪಿ ನಡೆಸುತ್ತಿರುವ ಟೀಕೆಗೆ ಪ್ರತಿಕ್ರಿಯೆ ನೀಡುತ್ತಾ ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು ತೀವ್ರ ವಾಗ್ದಾಳಿ ನಡೆಸಿದರು.
ಪ್ರಧಾನಿ ನರೇಂದ್ರ ಮೋದಿ ಅವರು 2 ಕೋಟಿ ಉದ್ಯೋಗ ನೀಡುವುದಾಗಿ ಘೋಷಿಸಿದ್ದರೂ, ದೇಶದ ಯುವಕರಿಗೆ ನಿರೀಕ್ಷಿತ ಪ್ರಮಾಣದಲ್ಲಿ ಉದ್ಯೋಗಾವಕಾಶಗಳು ಸಿಕ್ಕಿಲ್ಲ ಎಂದು ಅವರು ಆರೋಪಿಸಿದರು. ರಾಜ್ಯದಲ್ಲಿಯೂ ಬಿಜೆಪಿ ಆಡಳಿತದ ಅವಧಿಯಲ್ಲಿ ಉದ್ಯೋಗ ಸೃಷ್ಟಿಯಲ್ಲಿ ಯಾವುದೇ ವಿಶೇಷ ಕ್ರಮಗಳು ಕಾಣಿಸಲಿಲ್ಲ ಎಂದು ಹೇಳಿದರು.
ಇಂತಹ ಪರಿಸ್ಥಿತಿಯಲ್ಲಿ ಪ್ರಸ್ತುತ ಸರ್ಕಾರವನ್ನು ಪ್ರಶ್ನಿಸಲು ಬಿಜೆಪಿಗೆ ಯಾವುದೇ ನೈತಿಕ ಹಕ್ಕಿಲ್ಲ ಎಂದು ಟೀಕಿಸಿದ ಅವರು, ಸರ್ಕಾರಿ ನೇಮಕಾತಿ ಪ್ರಕ್ರಿಯೆ ಒಳಮೀಸಲಾತಿ ಸಂಬಂಧಿತ ಸಮಸ್ಯೆಯಿಂದ ಕೆಲಕಾಲ ವಿಳಂಬವಾಗಿತ್ತು ಎಂದರು.
ಆದರೆ, ಈಗ ನೇಮಕಾತಿ ಪ್ರಕ್ರಿಯೆಯನ್ನು ಶೀಘ್ರದಲ್ಲೇ ಪ್ರಾರಂಭಿಸಿ ಹಂತ ಹಂತವಾಗಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು. ಸರ್ಕಾರ ನುಡಿದಂತೆ ನಡೆದು ಸರ್ಕಾರಿ ನೇಮಕಾತಿಗಳನ್ನು ಕೈಗೆತ್ತಿಕೊಳ್ಳಲಿದ್ದು, ಈ ಕುರಿತು ಬಜೆಟ್‌ನಲ್ಲಿಯೂ ಘೋಷಣೆ ಮಾಡಲಾಗುವುದು ಎಂದು ತಿಳಿಸಿದರು.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲEditor Kannada Express 1st Floor, Raaj Towers Udupi - 576101
+919008424891
Kannadaexpress@gmail.com
© 2025 KannadaExpress. All Rights Reserved.
Design by GreyCrust Solutions