ಉಡುಪಿ, ಆಗಸ್ಟ್ 21 (ಕವಾ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಧರ್ಮ ಪರಿಪಾಲನ ಸಂಘ (ರಿ) ಮಣಿಪುರ ಇವರ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ ಕಾರ್ಯಕ್ರಮವು ಸೆಪ್ಟಂಬರ್ 7 ರಂದು ಬೆಳಗ್ಗೆ 10 ಗಂಟೆಗೆ ಮಣಿಪುರದ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶಿವರಾಜ ಎಸ್ ತಂಗಡಗಿ, ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಬಿ.ವೈ ರಾಘವೇಂದ್ರ, ಶಾಸಕರುಗಳಾದ ಯಶ್‌ಪಾಲ್ ಎ ಸುವರ್ಣ, ವಿ ಸುನಿಲ್ ಕುಮಾರ್, ಗುರುರಾಜ್ ಶೆಟ್ಟಿ ಗಂಟಿಹೊಳೆ ಹಾಗೂ ಎ ಕಿರಣ್ ಕುಮಾರ್ ಕೊಡ್ಗಿ, ವಿಧಾನಪರಿಷತ್ ಶಾಸಕರುಗಳಾದ ಎಸ್.ಎಲ್.
ಭೋಜೇಗೌಡ, ಮಂಜುನಾಥ್ ಭಂಡಾರಿ, ಡಾ. ಧನಂಜಯ ಸರ್ಜಿ ಹಾಗೂ ಕಿಶೋರ್ ಕುಮಾರ್ ಪುತ್ತೂರು, ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಮಣಿಪುರ ಗ್ರಾಮ ಪಂಚಾಯತ್ ಅಧ್ಯಕ್ಷೆ ಚೈತ್ರಾ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರೋಹಿಣಿ ಸಿಂಧೂರಿ, ಮಣಿಪುರ ಬ್ರಹ್ಮಶ್ರೀ ನಾರಾಯಣ ಗುರು ಧರ್ಮ ಪರಿಪಾಲನ ಸಂಘದ ಅಧ್ಯಕ್ಷ ನಟರಾಜ್ ಪೂಜಾರಿ ಹಾಗೂ ಮತ್ತಿತರರು ಭಾಗವಹಿಸಲಿದ್ದು, ಸಾಂಸ್ಕೃತಿಕ ಚಿಂತಕ ದಯಾನಂದ ಕರ್ಕೇರ ಉಗ್ಗೆಲ್‌ಬೆಟ್ಟು ಉಪನ್ಯಾಸ ನೀಡಲಿದ್ದಾರೆ.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ© 2025 KannadaExpress. All Rights Reserved.
Design by GreyCrust Solutions