ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಕೊಕ್ಕರ್ಣೆಯ ಪುಟ್ಟನಕಟ್ಟೆ ಎಂಬಲ್ಲಿ ಇಂದು ಬೆಳಗ್ಗೆ ಚಾಕು ಇರಿತಕ್ಕೆ ಒಳಗಾಗಿ ಗಂಭೀರ ಸ್ಥಿತಿಯಲ್ಲಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ ಸಂಜೆ ವೇಳೆ ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮದುವೆ ನಿರಾಕರಿಸಿದ ಕಾರಣಕ್ಕಾಗಿ ಆರೋಪಿ ಕೊಕ್ಕರ್ಣೆ ಚೆಗರಿಬೆಟ್ಟು ನಿವಾಸಿ ಕಾರ್ತಿಕ್ ಪೂಜಾರಿ, ತನ್ನ ನೆರೆಮನೆಯ ರಕ್ಷಿತಾ ಪೂಜಾರಿ (24) ಎಂಬಾಕೆಯನ್ನು ಚೂರಿಯಿಂದ ಕುತ್ತಿಗೆ ಹಾಗೂ ಎದೆಯ ಭಾಗಕ್ಕೆ ಇರಿದು ಪರಾರಿಯಾಗಿದ್ದನು. ಇದರಿಂದ ಗಂಭೀರವಾಗಿ ಗಾಯಗೊಂಡ ರಕ್ಷಿತಾ ಅವರನ್ನು ಮಣಿಪಾಲ ಆಸ್ಪತ್ರೆ ದಾಖಲಿಸಲಾಗಿತ್ತು.
ಗಂಭೀರ ಸ್ಥಿತಿಯಲ್ಲಿದ್ದ ಅಕ್ಷತಾ ಸಂಜೆ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರೆಂದು ಉಡುಪಿ ಎಸ್ಪಿ ಹರಿರಾಂ ಶಂಕರ್ ತಿಳಿಸಿದ್ದಾರೆ.
ಈ ಬಗ್ಗೆ ಆರೋಪಿ ವಿರುದ್ಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.
ಕೊಲೆ ಆರೋಪಿ ಕಾರ್ತಿಕ್ ಪೂಜಾರಿಯ ಮೃತದೇಹ ಅಲ್ಲೇ ಸಮೀಪದ ಬಾವಿಯಲ್ಲಿ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಈತ ಕೊಲೆ ಮಾಡಿದ ಬಳಿಕ ಪರಾರಿಯಾಗಿ ಅಲ್ಲೇ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ© 2025 KannadaExpress. All Rights Reserved.
Design by GreyCrust Solutions