ರಾಜ್ಯದ ಉಪಚುನಾವಣೆಯ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಯಾವುದೇ ಸಂಬಂಧ ಇಲ್ಲ. ಈ ಬಗ್ಗೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಈಗಾಗಲೆ ಸ್ಪಷ್ಟಪಡಿಸಿದ್ದಾರೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ನಗರದಲ್ಲಿ ಶುಕ್ರವಾರ ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು ನಾಯಕತ್ವ ಬದಲಾವಣೆ ವಿಚಾರಗಳ ಬಗ್ಗೆ ಪಕ್ಷದ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಉಪ ಚುನಾವಣೆ ನಡೆದ ಎರಡೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂದರು.
*ಔಷಧಗಳ ಕೊರತೆ: ಮಧ್ಯಪ್ರಾಚ್ಯ ಯುದ್ಧದ ಹಿನ್ನಲೆಯಲ್ಲಿ ಭಾರತಕ್ಕೆ ಆಮದಾಗುತ್ತಿದ್ದ ಕೆಲವು ಔಷಧಗಳು ಬಂದಿಲ್ಲ. ಔಷಧದ ಪೂರೈಕೆಗೆ ಸ್ವಲ್ಪಸಮಯವಕಾಶ ಕೇಳಿದ್ದಾರೆ. ಈ ಹಿಂದೆ ಕೊಟ್ಟಿರುವ ಆರ್ಡರ್‌ಗಳ ಡೆಲಿವರಿ ಮಾಡಲು ಆಗುತ್ತಿಲ್ಲ. ಮೆಡಿಸಿನ್ ತಯಾರಿಕೆ ಮಾಡುವವರಿಗೂ ಕಚ್ಚಾವಸ್ತುಗಳು ಬಾರದೆ ಸಮಸ್ಯೆಯಾಗಿದೆ. ಕೆಲವು ಔಷಧಗಳ ಬೆಲೆಯಲ್ಲೂ ಏರಿಕೆಯಾಗಿದೆ. ಮೆಡಿಸಿನ್ ಉತ್ಪಾದನಾ ವೆಚ್ಚವೂ ಹೆಚ್ಚಾಗಿದೆ. ಇದು ಹೆಚ್ಚಾಗದಂತೆ ಕೇಂದ್ರ ಸರಕಾರ ನೋಡಿಕೊಳ್ಳಬೇಕು. ಸ್ಥಳೀಯ ತಯಾರಿಕರಿಗೆ ಗ್ಯಾಸ್, ಇಂಧನ ಕೊರತೆಯಾದರೆ ಸಮಸ್ಯೆ ಯಾಗಬಹುದು. ಆಯಿಲ್, ಪೆಟ್ರೋಲಿಯಂ ಸೆಕ್ಟರ್‌ನ ಎಲ್ಲಾ ಕಂಪನಿಗಳಿಗೆ ಸಮಸ್ಯೆಯಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲEditor Kannada Express 1st Floor, Raaj Towers Udupi - 576101
+919008424891
Kannadaexpress@gmail.com
© 2025 KannadaExpress. All Rights Reserved.
Design by GreyCrust Solutions