ಕರ್ನಾಟಕ ಸರಕಾರದ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಫೆಬ್ರವರಿ 25ರಂದು ಉಡುಪಿ ಜಿಲ್ಲೆಗೆ ಪ್ರವಾಸ ಕೈಗೊಳ್ಳಲಿದ್ದಾರೆ.
ಅವರು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಹೊರಟು, 11 ಗಂಟೆಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಲಿದ್ದಾರೆ. ಬಳಿಕ 11.10ಕ್ಕೆ ಹೆಲಿಕಾಪ್ಟರ್ ಮೂಲಕ ಪ್ರಯಾಣ ಬೆಳೆಸಿ, 11.30ಕ್ಕೆ ಕಾರ್ಕಳ ತಾಲೂಕು ಕ್ರೀಡಾಂಗಣದ ಹೆಲಿಪ್ಯಾಡ್‌ಗೆ ಆಗಮಿಸಲಿದ್ದಾರೆ.
ಕಾರ್ಕಳದ ಕಾಬೆಟ್ಟುವಿನಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಡಾ.ಬಿ.ಆರ್. ಅಂಬೇಡ್ಕರ್ ಭವನ ಕಟ್ಟಡವನ್ನು ಉದ್ಘಾಟಿಸಲಿರುವ ಅವರು, ಕಾರ್ಕಳ ತಾಲೂಕು ಕಚೇರಿ ರಸ್ತೆಯ ಕುಕ್ಕುಂದೂರುದಲ್ಲಿರುವ ಕಿಸಾನ್ ಸಭಾ ಟ್ರಸ್ಟ್‌ನ ಮಹಾತ್ಮಾ ಗಾಂಧಿ ವಸತಿ ಪ್ರೌಢಶಾಲೆಯ ಕಿಸಾನ್ ಸಭಾ ಸಭಾಂಗಣ ಉದ್ಘಾಟನೆ ಹಾಗೂ 35ನೇ ವರ್ಷದ ಸಮಾರಂಭಕ್ಕೆ ಚಾಲನೆ ನೀಡಲಿದ್ದಾರೆ.
ಇದಾದ ಬಳಿಕ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಲಿರುವ ಮುಖ್ಯಮಂತ್ರಿ, ಸಂಜೆ 4 ಗಂಟೆಗೆ ಹೆಲಿಕಾಪ್ಟರ್ ಮೂಲಕ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳಿ, ಅಲ್ಲಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಮರಳಲಿದ್ದಾರೆ.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲEditor Kannada Express 1st Floor, Raaj Towers Udupi - 576101
+919008424891
Kannadaexpress@gmail.com
© 2025 KannadaExpress. All Rights Reserved.
Design by GreyCrust Solutions