Advertisement

13ನೇ ದಿನಕ್ಕೆ ಕಾಲಿಟ್ಟ ಸಿಜೆಪಿ ಪ್ರತಿಭಟನೆ: ಹದಗೆಟ್ಟ ವಾಂಗ್ಚೂಕ್ ಆರೋಗ್ಯ

ದೆಹಲಿಯ ಜಂತರ್‌ ಮಂತರ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆ 13ನೇ ದಿನಕ್ಕೆ ಕಾಲಿಟ್ಟಿದೆ.

ಮತ್ತೊಂದೆಡೆ ಪ್ರತಿಭಟನೆ ಬೆಂಬಲಿಸಿ ಹೋರಾಟಗಾರ ಸೋನಮ್ ವಾಂಗ್ಚೂಕ್ ಅವರು ಕೈಗೊಂಡಿರುವ ಉಪವಾಸ ಸತ್ಯಾಗ್ರಹ ಐದನೇ ದಿನಕ್ಕೆ ಕಾಲಿಟ್ಟಿದೆ.

'ಸೋನಮ್ ವಾಂಗ್ಚೂಕ್ ಅವರ ಆರೋಗ್ಯ ಸ್ಥಿತಿ ಹದಗೆಡುತ್ತಿದ್ದು, ರಕ್ತದಲ್ಲಿನ ಸಕ್ಕರೆ ಮಟ್ಟ 60ಕ್ಕೆ ಇಳಿಕೆಯಾಗಿದೆ. ರಕ್ತದೊತ್ತಡವೂ ಕಡಿಮೆಯಾಗಿದೆ' ಎಂದು ಸಿಜೆಪಿಯ ಸಂಸ್ಥಾಪಕ ಅಭಿಜೀತ್ ದೀಪ್ಕೆ ಹೇಳಿದ್ದಾರೆ.

'ವಾಂಗ್ಚೂಕ್ ಅವರಿಗೆ ಏನಾದರೂ ಸಂಭವಿಸಿದರೆ ಸರ್ಕಾರವೇ ಹೊಣೆ' ಎಂದು ಅವರು ಎಚ್ಚರಿಸಿದ್ದಾರೆ.

ಈ ನಡುವೆ ಧರಣಿಯನ್ನು ಮುಂದುವರಿಸುವ ಕುರಿತು ಪ್ರತಿಕ್ರಿಯೆ ಸಂಗ್ರಹಿಸಲು 'ಚಾಯ್ ಪೇ ಚರ್ಚಾ' ಪ್ರಾರಂಭಿಸಿದ್ದಾರೆ.

ನೀಟ್ ಸೇರಿದಂತೆ ಪರೀಕ್ಷಾ ಅಕ್ರಮಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಜೂನ್ 20ರಂದು ಸಿಜೆಪಿ ಪ್ರತಿಭಟನೆ ಆರಂಭಿಸಿತ್ತು. ಹೋರಾಟವನ್ನು ಮತ್ತಷ್ಟು ವಿಸ್ತರಿಸುವ ಕುರಿತಾಗಿಯೂ ಸಿಜೆಪಿ ಚಿಂತನೆ ನಡೆಸುತ್ತಿದೆ.

ಅಖಿಲ ಭಾರತ ವಿದ್ಯಾರ್ಥಿ ಅಸೋಸಿಯೇಷನ್‌‌ನ (ಎಐಎಸ್‌ಎ) ಆರು ವಿದ್ಯಾರ್ಥಿಗಳು ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಮುಂದುವರಿಸಿದ್ದಾರೆ.

KannadaExpress

Advertisement

ವಾರ್ತಾಪತ್ರಿಕೆ ಚಂದಾದಾರಿಕೆ

ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ

ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ
Get In Touch

Editor Kannada Express 1st Floor, Raaj Towers Udupi - 576101

+919008424891

Kannadaexpress@gmail.com

Follow Us
Advertisements

© 2025 KannadaExpress. All Rights Reserved.
Design by GreyCrust Solutions