'ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್ ದರವನ್ನು ₹ 29 ಏರಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ, 'ಇದೇನಾ ಅಚ್ಛೇ ದಿನ್' ಎಂದು ಪ್ರಶ್ನಿಸಿದ್ದಾರೆ.
'ಕಳೆದ 3 ತಿಂಗಳಲ್ಲಿ 2ನೇ ಬಾರಿ ಅಡುಗೆ ಅನಿಲ ದರ ಏರಿಕೆ ಮಾಡಲಾಗಿದ್ದು, ಸುಮಾರು ₹ 90 ಹೊರೆ ಬಿದ್ದಿದೆ. ಇದರಿಂದ ಬಡವರು, ಮಧ್ಯಮವರ್ಗದವರು ನಲುಗಿ ಹೋಗಿದ್ದಾರೆ. ಇದೆಲ್ಲವೂ ಕೇಂದ್ರ ಸರ್ಕಾರದ ದುರಾಡಳಿತದ ಫಲ. ಬಿಜೆಪಿ ಮತ್ತು ಮಿತ್ರಪಕ್ಷಗಳಿಗೆ ಜನರೇ ಬೀದಿಗಿಳಿದು ಬುದ್ಧಿಕಲಿಸುವ ದಿನ ದೂರವಿಲ್ಲ' ಎಂದು ಅವರು ಹೇಳಿದ್ದಾರೆ.
'ಕಾಂಗ್ರೆಸ್ ನೇತೃತ್ವದ ಯುಪಿಎ ಅವಧಿಯಲ್ಲಿ ₹ 3 ರಿಂದ ₹ 4 ದರ ಹೆಚ್ಚಳವಾದರೂ ತಲೆ ಮೇಲೆ ಅನಿಲ ಸಿಲಿಂಡರ್ ಹೊತ್ತು ಪ್ರತಿಭಟನೆ ಮಾಡುತ್ತಿದ್ದ ಬಿಜೆಪಿಗರು ಈಗ ಏಕೆ ಬಾಯಿಗೆ ಬೀಗ ಹಾಕಿಕೊಂಡಿದ್ದಾರೆ. ಈಗ ಇವರ ಬಡವರ ಪರ ಕಾಳಜಿ ಎಲ್ಲಿ ಹೋಯಿತು? ವಾಣಿಜ್ಯ ಬಳಕೆಯ ಸಿಲಿಂಡರ್ ದರ ₹ 3,200. ದಾಟಿದ್ದು, ಹೊಟೆಲ್ ಗಳಲ್ಲಿ ಎಲ್ಲ ತಿಂಡಿ ತಿನಿಸುಗಳ ದರ ಹೆಚ್ಚಳ ಆಗಿದೆ. ಪೆಟ್ರೋಲ್ ಡೀಸೆಲ್ ದರ ಹೆಚ್ಚಳದಿಂದ ಜೀವನಾವಶ್ಯಕ ವಸ್ತುಗಳ ದರವೂ ಗಗನಕ್ಕೆ ಏರಿದೆ. ಬಡವರು, ಮಧ್ಯಮವರ್ಗದವರ ಬದುಕು ದುಸ್ತರವಾಗುತ್ತಿದೆ' ಎಂದು ಹೇಳಿದ್ದಾರೆ.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲEditor Kannada Express 1st Floor, Raaj Towers Udupi - 576101
+919008424891
Kannadaexpress@gmail.com
© 2025 KannadaExpress. All Rights Reserved.
Design by GreyCrust Solutions