ಉಡುಪಿ: ಬೊಮ್ಮರಬೆಟ್ಟು ಗ್ರಾಪಂ ಉಪಾಧ್ಯಕ್ಷರು ಹಾಗೂ ಅವರ ಸಹಚರರು ಭ್ರಷ್ಟಾಚಾರ ಹಾಗೂ ಕಾನೂನು ಬಾಹಿರ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ ಎಂದು ಆರೋಪಿಸಿ ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ (ಉತ್ತರ) ಬೊಮ್ಮರಬೆಟ್ಟು ಗ್ರಾಮೀಣ ಕಾಂಗ್ರೆಸ್ ಸಮಿತಿ, ಹಿರಿಯಡಕ ಇದರ ವತಿಯಿಂದ ಹಿರಿಯಡಕದ ಗ್ರಾಪಂ ವಠಾರದಲ್ಲಿ ಸೋಮವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡ ಡಾ.ಸಂತೋಷ್ ಬೈರಂಪಳ್ಳಿ ಬೊಮ್ಮರಬೆಟ್ಟು ಗ್ರಾಮ ಪಂಚಯತ್ ಭ್ರಷ್ಟಾಚಾರ ಕೇಂದ್ರ ಬಿಂದುವಾಗಿದೆ.ಬಡ ಜನರು ತಮ್ಮ ಕೆಲಸ ಕಾರ್ಯಗಳಿಗೆ ಬರಬೇಕಾದರೆ ಉಪಾಧ್ಯಕ್ಷರು ಮತ್ತು ಸದಸ್ಯರಿಗೆ ಲಂಚ ನೀಡುವ ಪರಿಸ್ಥಿತಿ ಬಂದೊದಗಿದೆ ಎಂದರು.ಅಷ್ಟೇ ಅಲ್ಲದೆ ಹಿರಿಯಡ್ಕ ವ್ಯಾಪ್ತಿಯಲ್ಲಿ ಮರದ ವ್ಯಾಪಾರಿಗಳ ಬಳಿ ಲಂಚಕ್ಕೆ ಬೇಡಿಕೆ ಇಟ್ಟ ವಿಡಿಯೋಗಳು ವೈರಲ್ ಅಗಿದೆ.ಜನಪ್ರತಿನಿಧಿಗಳಾದವರು ಈ ಮಟ್ಟಕ್ಕೆ ಭ್ರಷಗಚಾರಕ್ಕಿಳಿಯಲು ಸ್ಥಳೀಯ ಶಾಸಕರು ಬೆನ್ನಿಗಿದ್ದಾರೆ ಎಂದು ಆರೋಪಿಸಿದರು.
ಕೆಪಿಸಿಸಿ ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷ ಹರೀಶ್ ಕಿಣಿ ಅಲೆವೂರು, ಎನ್ಎಸ್ ಯುಐ ಜಿಲ್ಲಾಧ್ಯಕ್ಷ ಸೌರಭ ಬಲ್ಲಾಳ್, ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ (ಉತ್ತರ) ಅಧ್ಯಕ್ಷ ಚರಣ್ ವಿಠಲ, ಬೊಮ್ಮರಬೆಟ್ಟು ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ರವೀಂದ್ರ ಪೂಜಾರಿ, ಮುಖಂಡರಾದ ಪುಷ್ಪಾ ಅಂಚನ್, ಸಹನಾ ಕಾಮತ್, ಲಕ್ಷ್ಮೀನಾರಾಯಣ ಪ್ರಭು ಉಪಸ್ಥಿತರಿದ್ದರು.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ© 2025 KannadaExpress. All Rights Reserved.
Design by GreyCrust Solutions