ಮಕ್ಕಳ ಪ್ರಾಥಮಿಕ ಹಂತದಲ್ಲೇ ಸಾಹಿತ್ಯದ ಅಭಿರುಚಿ ಬೆಳೆಸುವ ಕಾರ್ಯ ಅತ್ಯಂತ ಶ್ಲಾಘನೀಯ ಎಂದು ಪತ್ರಕರ್ತ ರವೀಂದ್ರ ಕೋಟ ಹೇಳಿದರು.
ಶನಿವಾರ ಗುಂಡ್ಮಿ ವೇ.ಮೂ. ಸತ್ಯನಾರಾಯಣ ಉಪಾಧ್ಯಾಯ ಅವರ ಮನೆಯಲ್ಲಿ ಸಾಲಿಗ್ರಾಮದ ಕೋಟ ಶಿವರಾಮ ಕಾರಂತ ಮಕ್ಕಳ ಸಾಹಿತ್ಯ ವೇದಿಕೆ ಹಾಗೂ ಸಾಹಿತ್ಯ ಸಂಘದ ಆಶ್ರಯದಲ್ಲಿ ವಿವೇಕ ಬಾಲಕಿಯರ ಪ್ರೌಢಶಾಲೆ, ಕೋಟ ಇವರ ಸಹಯೋಗದಲ್ಲಿ ನಡೆದ ವರ್ಷ ಸಂಭ್ರಮ–ಕೃತಿ ಬಿಡುಗಡೆ ಹಾಗೂ 17ನೇ ಅಣ್ಣಾಜಿ ಬಲ್ಲಾಳ ಸ್ಮಾರಕ ಬಾಲ ಪುರಸ್ಕಾರ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.
ಆಧುನಿಕ ಕಾಲಘಟ್ಟದಲ್ಲಿ ಮಕ್ಕಳನ್ನು ಕೇಂದ್ರವಾಗಿರಿಸಿಕೊಂಡು ವಿವಿಧ ಸಾಹಿತ್ಯಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಪರಿಸರದಲ್ಲಿ ಸಾಹಿತ್ಯದ ಕಂಪು ಪಸರಿಸುವಂತೆ ಮಾಡಲಾಗುತ್ತಿದೆ. ಅಲ್ಲದೆ, ಡಾ. ಅಣ್ಣಾಜಿ ಬಲ್ಲಾಳ ಅವರ ಹೆಸರಿನಲ್ಲಿ ನೀಡಲಾಗುತ್ತಿರುವ ಸಾಹಿತ್ಯಿಕ ಪ್ರಶಸ್ತಿ ವಿದ್ಯಾರ್ಥಿಗಳಲ್ಲಿ ಸಾಹಿತ್ಯದ ಮುನ್ನಡೆಯಿಗೆ ಪ್ರೇರಣೆಯಾಗಲಿದೆ ಎಂದರು.
ಈ ಸಂದರ್ಭದಲ್ಲಿ ಅವಣಿ ಹೊಳ್ಳ ಅವರಿಗೆ ಅಣ್ಣಾಜಿ ಬಲ್ಲಾಳ ಬಾಲ ಪುರಸ್ಕಾರ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮವನ್ನು ವೇ.ಮೂ. ಸತ್ಯನಾರಾಯಣ ಉಪಾಧ್ಯಾಯ ಉದ್ಘಾಟಿಸಿದರು. ವಿವೇಕ ವಿದ್ಯಾಸಂಸ್ಥೆಯ ನಿವೃತ್ತ ಮುಖ್ಯ ಶಿಕ್ಷಕ ವೆಂಕಟೇಶ ಉಡುಪ ಅವರು ಕುಮಾರಿ ಅವಣಿ ಹೊಳ್ಳ ರಚಿಸಿದ ‘ಮನದ ಮಾತು’ ಕವನ ಸಂಕಲನವನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು.
ವರ್ಷ ಸಂಭ್ರಮದ ಅಧ್ಯಕ್ಷತೆಯನ್ನು ವಿವೇಕ ಬಾಲಕಿಯರ ಪ್ರೌಢಶಾಲೆಯ ವಿದ್ಯಾರ್ಥಿನಿ ಅನಘ ಹೊಳ್ಳ ವಹಿಸಿದ್ದರು. ಕೋಟ ಶಿವರಾಮ ಕಾರಂತ ಮಕ್ಕಳ ಸಾಹಿತ್ಯ ವೇದಿಕೆ ಅಧ್ಯಕ್ಷ ಪ್ರೊ. ಚಿತ್ರಪಾಡಿ ಉಪೇಂದ್ರ ಸೋಮಯಾಜಿ ಅಣ್ಣಾಜಿ ಬಲ್ಲಾಳ ಪುರಸ್ಕಾರ ಸಭೆಯ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ವಿವೇಕ ಬಾಲಕಿಯರ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಪ್ರೇಮಾನಂದ, ಅವಣಿ ಹೊಳ್ಳ ಅವರ ಪೋಷಕರಾದ ಮಂಜುನಾಥ ಹೊಳ್ಳ ಉಪಸ್ಥಿತರಿದ್ದರು. ಸಾಹಿತ್ಯ ಸಂಘದ ಸಂಘಟಕಿ ಮಹಾಲಕ್ಷ್ಮೀ ಸೋಮಯಾಜಿ ಸ್ವಾಗತಿಸಿದರು. ಕೋಟ ವಿವೇಕ ಪ್ರೌಢಶಾಲೆಯ ವಿದ್ಯಾರ್ಥಿನಿ ಸೃಷ್ಟಿ ಆರ್. ಕಾರ್ಯಕ್ರಮ ನಿರೂಪಿಸಿದರು. ಕನ್ನಡ ಸಾಹಿತ್ಯ ವೇದಿಕೆಯ ಕಾರ್ಯದರ್ಶಿ ನಿಲಾವರ ಸುರೇಂದ್ರ ಅಡಿಗ ವಂದಿಸಿದರು.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲEditor Kannada Express 1st Floor, Raaj Towers Udupi - 576101
Kannadaexpress@gmail.com
© 2025 KannadaExpress. All Rights Reserved.
Design by GreyCrust Solutions