Advertisement

ಡಿ.ದೇವರಾಜ ಅರಸು ರವರ ಜನ್ಮ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿ - ಎಡಿಸಿ

ಹಿಂದುಳಿದ ವರ್ಗಗಳ ಧೀಮಂತ ನಾಯಕ ಮಾಜಿ ಮುಖ್ಯಮಂತ್ರಿ ದಿವಂಗತ ಡಿ ದೇವರಾಜ ಅರಸುರವರ 110 ನೇ ಜನ್ಮ ದಿನಾಚರಣೆಯನ್ನು ಜಿಲ್ಲಾ ಮಟ್ಟದಲ್ಲಿ ಅರ್ಥಪೂರ್ಣ ಹಾಗೂ ಕಳೆಗಟ್ಟುವ ರೀತಿಯಲ್ಲಿ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಎಂದು ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಾಜಿ ಮುಖ್ಯಮಂತ್ರಿ ಶ್ರೀ ಡಿ. ದೇವರಾಜ ಅರಸು ರವರ ಜನ್ಮ ದಿನಾಚರಣೆಯನ್ನು ಜಿಲ್ಲಾ ಮಟ್ಟದಲ್ಲಿ ಏರ್ಪಡಿಸುವ ಕುರಿತು ಚರ್ಚಿಸುವ ಸಲುವಾಗಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಡಿ.ದೇವರಾಜ ಅರಸು ರವರ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಆಗಸ್ಟ್ 20 ರಂದು ಬೆಳಗ್ಗೆ 10 ಗಂಟೆಗೆ ಉಡುಪಿಯ ಮಿಷನ್ ಕಂಪೌಂಡಿನ ಬಡಗಬೆಟ್ಟು ಕೋ ಆಪರೇಟಿವ್ ಸೊಸೈಟಿಯ ಜಗನ್ನಾಥ ಸಭಾಭವನದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಡಿ. ದೇವರಾಜ ಅರಸು ರವರ ದೂರದೃಷ್ಠಿ ಹಾಗೂ ಹಿಂದುಳಿದ ವರ್ಗಗಳ ಏಳಿಗೆಯ ಬಗ್ಗೆ ಅವರಿಗಿದ್ದ ಬದ್ಧತೆಯನ್ನು ಕಾರ್ಯಕ್ರಮದಲ್ಲಿ ಸ್ಮರಿಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಜನಪರ ಯೋಜನೆಗಳನ್ನು ರೂಪಿಸಿ, ಅನುಷ್ಠಾನಕ್ಕೆ ತಂದ ಡಿ. ದೇವರಾಜ ಅರಸು ರವರ ಜೀವನ ಸಾಧನೆ, ವ್ಯಕ್ತಿತ್ವ ಮತ್ತು ಕೊಡುಗೆಯ ಕುರಿತು ಉಪನ್ಯಾಸಕರಿಂದ ವಿಶೇಷ ಉಪನ್ಯಾಸ ಏರ್ಪಡಿಸಲಾಗುವುದು. ವಿದ್ಯಾರ್ಥಿಗಳಿಗೆ ಪ್ರಬಂಧ, ಭಾಷಣ ಸೇರಿದಂತೆ ಮತ್ತಿತರ ಸ್ಫರ್ಧೆಗಳನ್ನು ಆಯೋಜಿಸಿ ಬಹುಮಾನ ವಿತರಿಸಬೇಕು ಎಂದರು.

2024-25 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ, ಪಿ.ಯು.ಸಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ಜಿಲ್ಲಾ ಮಟ್ಟದ ಅತ್ಯಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿನಿಲಯದ ವಿದ್ಯಾರ್ಥಿಗಳಿಗೆ ಇದೇ ಸಂದರ್ಭದಲ್ಲಿ ನಗದು ಬಹುಮಾನ ನೀಡಿ, ಸನ್ಮಾನಿಸಲಾಗುವುದು ಎಂದ ಅವರು, ತಾಲೂಕು ಮಟ್ಟದಲ್ಲಿಯೂ ಸಹ ಡಿ.ದೇವರಾಜ ಅರಸು ರವರ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಆಚರಿಸಲು ಕ್ರಮ ವಹಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಯನ್ನು ಮುದ್ರಿಸಿ, ಜನಪ್ರತಿನಿಧಿಗಳಿಗೂ, ಗಣ್ಯರಿಗೂ ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು ಎಂದ ಅವರು, ಕಾರ್ಯಕ್ರಮಕ್ಕೆ ಅವರ ಅಭಿಮಾನಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲು ಅನುಕೂಲವಾಗುವಂತೆ ಹೆಚ್ಚಿನ ಪ್ರಚಾರ ನೀಡಬೇಕೆಂದರು.

ಸಭೆಯಲ್ಲಿ ಎಎಸ್‌ಪಿ ಸುಧಾಕರ ನಾಯಕ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಹಾಕಪ್ಪ ಆರ್ ಲಮಾಣಿ, ಪೌರಾಯುಕ್ತ ಮಹಾಂತೇಶ ಹಂಗರಗಿ, ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು, ಹಿಂದುಳಿದ ವರ್ಗಗಳ ವಿವಿಧ ಸಮುದಾಯಗಳ ಮುಖಂಡರುಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

KannadaExpress

Advertisement

ವಾರ್ತಾಪತ್ರಿಕೆ ಚಂದಾದಾರಿಕೆ

ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ

ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ
Get In Touch

Udupi

9985974521

Kannadaexpress@gmail.com

Follow Us
Advertisements

© 2025 KannadaExpress. All Rights Reserved.
Design by GreyCrust Solutions