Advertisement

ಆಗಸ್ಟ್ 20 ರಂದು ಉಡುಪಿಯಲ್ಲಿ ಡಿ.ದೇವರಾಜ ಅರಸುರವರ ಜನ್ಮ ದಿನಾಚರಣೆ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಹಿಂದುಳಿದ ವರ್ಗಗಳ ಧೀಮಂತ ನಾಯಕ, ಪರಿವರ್ತನೆಯ ಹರಿಕಾರ, ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಡಿ.ದೇವರಾಜ ಅರಸುರವರ 110 ನೇ ಜನ್ಮ ದಿನಾಚರಣೆಯ ಕಾರ್ಯಕ್ರಮವು ಆಗಸ್ಟ್ 20 ರಂದು ಬೆಳಗ್ಗೆ 10 ಗಂಟೆಗೆ ನಗರದ ಮಿಷನ್ ಕಂಪೌಂಡ್ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಜಗನ್ನಾಥ ಸಭಾಭವನದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು, ಶಾಸಕ ಯಶ್‌ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ ಎಸ್ ತಂಗಡಗಿ, ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಬಿ.ವೈ ರಾಘವೇಂದ್ರ, ಶಾಸಕರುಗಳಾದ ವಿ ಸುನಿಲ್ ಕುಮಾರ್, ಗುರುರಾಜ್ ಶೆಟ್ಟಿ ಗಂಟಿಹೊಳೆ, ಎ ಕಿರಣ್ ಕುಮಾರ್ ಕೊಡ್ಗಿ ಹಾಗೂ ಗುರ್ಮೆ ಸುರೇಶ್ ಶೆಟ್ಟಿ, ವಿಧಾನಪರಿಷತ್ ಶಾಸಕರುಗಳಾದ ಎಸ್.ಎಲ್.

ಭೋಜೇಗೌಡ, ಮಂಜುನಾಥ್ ಭಂಡಾರಿ, ಡಾ. ಧನಂಜಯ ಸರ್ಜಿ ಹಾಗೂ ಕಿಶೋರ್ ಕುಮಾರ್ ಪುತ್ತೂರು, ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರೋಹಿಣಿ ಸಿಂಧೂರಿ ಹಾಗೂ ಮತ್ತಿತರರು ಭಾಗವಹಿಸಲಿದ್ದು, ಡಿ.ದೇವರಾಜ ಅರಸುರವರ ವ್ಯಕ್ತಿತ್ವ ಮತ್ತು ಸಾಧನೆಯ ಕುರಿತು ಉಪ ಪೊಲೀಸ್ ಅಧೀಕ್ಷಕ ಡಿ.ಟಿ ಪ್ರಭು ಉಪನ್ಯಾಸ ನೀಡಲಿದ್ದಾರೆ.

KannadaExpress

Advertisement

ವಾರ್ತಾಪತ್ರಿಕೆ ಚಂದಾದಾರಿಕೆ

ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ

ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ
Get In Touch

Udupi

9985974521

Kannadaexpress@gmail.com

Follow Us
Advertisements

© 2025 KannadaExpress. All Rights Reserved.
Design by GreyCrust Solutions