Advertisement

ದಾವಣಗೆರೆ | ಕ್ರೈಸ್ತರ ಅಭಿವೃದ್ಧಿಗೆ ಕಾಂಗ್ರೆಸ್‌ ಬದ್ಧ : ಪ್ರಶಾಂತ ಜತ್ತನ್ನ

ಕಾಂಗ್ರೆಸ್‌ ಪಕ್ಷ ಕ್ರೈಸ್ತ ಸಮುದಾಯದ ಅಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದು, ಜಿಲ್ಲೆಯಲ್ಲೂ ದಿ. ಶಾಮನೂರು ಶಿವಶಂಕರಪ್ಪ ಮತ್ತು ಎಸ್.ಎಸ್. ಮಲ್ಲಿಕಾರ್ಜುನ ಅವರ ಕೊಡುಗೆ ಅಪಾರವಾಗಿದೆ ಎಂದು ಕರ್ನಾಟಕ ಕ್ರೈಸ್ತ ಅಭಿವೃದ್ಧಿ ನಿಗಮದ ನಿರ್ದೇಶಕ ಪ್ರಶಾಂತ ಜತ್ತನ್ನ ಹೇಳಿದರು.

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆ ಏಪ್ರಿಲ್‌ 6ರಂದು ದಾವಣಗೆರೆಯ ಸಿ.ಎಸ್.ಐ ಕ್ರಾಂತಿ ಚರ್ಚ್ ಸಮುದಾಯ ಭವನದಲ್ಲಿ ನಡೆದ ಜಿಲ್ಲೆಯ ಎಲ್ಲಾ ಕ್ರೈಸ್ತ ಮುಖಂಡರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಉಪಚುನಾವಣೆಯಲ್ಲಿ ಎಲ್ಲಾ ಕ್ರೈಸ್ತ ಪಂಗಡ ಮತ್ತು ಉಪಪಂಗಡಗಳ ಮತದಾರರು ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಮಲ್ಲಿಕಾರ್ಜುನ ಅವರಿಗೆ ತಮ್ಮ ಅಮೂಲ್ಯ ಮತವನ್ನು ನೀಡಿ ಅವರನ್ನು ಜಯಶಾಲಿಯಾಗಿಸಬೇಕೆಂದು ಕರೆ ನೀಡಿದರು.

ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್, ಸಚಿವ ರಹೀಮ್ ಖಾನ್, ವಿಧಾನ ಪರಿಷತ್ ಸದಸ್ಯರಾದ ಸಲೀಮ್ ಅಹಮದ್, ಬಲ್ಕಿಸ್ ಬಾನು, ಸೂಡ ನಿರ್ದೇಶಕ ಫ್ರಾನ್ಸಿಸ್ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಭಾರತೀಯ ಕ್ರೈಸ್ತ ಒಕ್ಕೂಟದ ರಾಜ್ಯ ಉಪಾಧ್ಯಕ್ಷ ಡಾ. ಪ್ರದೀಪ್ ಡಿಮೆಲ್ಲೋ ಉಪಸ್ಥಿತರಿದ್ದರು.

KannadaExpress

Advertisement

ವಾರ್ತಾಪತ್ರಿಕೆ ಚಂದಾದಾರಿಕೆ

ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ

ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ
Get In Touch

Editor Kannada Express 1st Floor, Raaj Towers Udupi - 576101

+919008424891

Kannadaexpress@gmail.com

Follow Us
Advertisements

© 2025 KannadaExpress. All Rights Reserved.
Design by GreyCrust Solutions