ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ಅಪರಾಧ ಕೃತ್ಯಗಳಿಗೆ ಸಂಬಂಧಿಸಿ ಹೂತು ಹಾಕಲಾಗಿದೆ ಎನ್ನಲಾದ ಮೃತದೇಹಗಳ ಪತ್ತೆಗಾಗಿ ನಡೆಯುತ್ತಿರುವ ಶೋಧ ಕಾರ್ಯಾಚರಣೆ ಮುಂದುವರಿದಿದ್ದು, ಶನಿವಾರ ಎಸ್.ಐ.ಟಿ. ತಂಡ ಹೊಸ ಸ್ಥಳದಲ್ಲಿ ಪರಿಶೀಲನೆ ಆರಂಭಿಸಿದೆ.
ಧರ್ಮಸ್ಥಳ ಮುಖ್ಯದ್ವಾರದ ಸಮೀಪದ ಬಾಹಬಲಿ ಬೆಟ್ಟದ ಕೆಳಭಾಗದ ಅರಣ್ಯದಲ್ಲಿ ಶೋಧ ಕಾರ್ಯಕ್ಕೆ ಮುಂದಾಗಿದೆ. ಎಸ್.ಐ.ಟಿ ಅಧಿಕಾರಿಗಳು ಸಕಲ ಸಿದ್ಧತೆಯೊಂದಿಗೆ ಆಗಮಿಸಿದ್ದಾರೆ. ಜೊತೆಗೆ ಪುತ್ತೂರು ಉಪ ವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್, ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ, ವೈದ್ಯರ ತಂಡ, ಅರಣ್ಯಾಧಿಕಾರಿಗಳು, ಎಫ್.ಎಸ್.ಎಲ್. ತಂಡ, ಐ.ಎಸ್.ಡಿ. ಹಾಗೂ ಇತರ ಅಧಿಕಾರಿಗಳ ಸಹಿತ ಎಲ್ಲ ತಂಡಗಳು ಸ್ಥಳದಲ್ಲಿ ಮೊಕ್ಕಾಂ ಹೂಡಿವೆ.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ© 2025 KannadaExpress. All Rights Reserved.
Design by GreyCrust Solutions