ಅನಾಮಿಕ ಸಾಕ್ಷಿದೂರುದಾರನ ಹೇಳಿಕೆಯಂತೆ ಕಾರ್ಯಾಚರಣೆ ನಡೆಸುತ್ತಿರುವ ಎಸ್.ಐ.ಟಿ ತಂಡ ಶುಕ್ರವಾರ ಹೊಸ ಸ್ಥಳದಲ್ಲಿ ಪರಿಶೀಲನೆ ಆರಂಭಿಸಿದೆ. ಧರ್ಮಸ್ಥಳ ಗ್ರಾಮದ ಬೊಳಿಯಾರ್ ಗೋಂಕ್ರತಾರ್ ಸಮೀಪಕ್ಕೆ ಇಂದು ಸಾಕ್ಷಿ ದೂರುದಾರನೊಂದಿಗೆ ಎಸ್.ಐ.ಟಿ ತಂಡ ಆಗಮಿಸಿದೆ.
ಕಳೆದ ಎರಡು ವಾರಗಳಿಂದ ನೇತ್ರಾವತಿ ಸ್ನಾನಘಟ್ಟದ ಸಮೀಪ ಸಾಕ್ಷಿ ದೂರು ದಾರ ತೋರಿಸಿದ ಜಾಗದಲ್ಲಿ ಅಗೆಯುವ ಪ್ರಕ್ರಿಯೆ ನಡೆಸಲಾಗಿತ್ತು. ಇದೀಗ ಹೊಸ ಸ್ಥಳಕ್ಕೆ ಸಾಕ್ಷಿ ದೂರುದಾರನನ್ನು ಕರೆತಂದಿದ್ದಾರೆ. ಇಲ್ಲಿ ಸಾಕ್ಷಿ ದೂರುದಾರ ಎಷ್ಟು ಸ್ಥಳಗಳನ್ನು ಗುರುತಿಸುತ್ತಾನೆ ಎಂಬುದು ಕುತೂಹಲದ ವಿಚಾರವಾಗಿದೆ.
ಒಟ್ಟಾರೆಯಾಗಿ ಎಸ್.ಐ.ಟಿ ತಂಡ ನೇತ್ರಾವತಿ ಸ್ನಾನಘಟ್ಟದಲ್ಲಿ ಒಂದು ಹಂತದ ಕಾರ್ಯಾಚರಣೆ ಮುಗಿಸಿ ಎರಡನೇ ಹಂತದ ಕಾರ್ಯಾಚರಣೆಗೆ ಮುಂದಾಗಿದೆ. ನೇತ್ರಾವತಿ ಸ್ನಾನಘಟ್ಟದಲ್ಲಿ ಎರಡು ಕಡೆಗಳಲ್ಲಿ ಕಳೇಬರಗಳು ಲಭಿಸಿತ್ತು. ಇನ್ನು ಬೊಳಿಯಾರು ಪ್ರದೇಶದಲ್ಲಿ ಏನು ನಡೆಯಲಿದೆ ಎಂಬ ಕುತೂಹಲ ಜನರದ್ದಾಗಿದೆ.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ© 2025 KannadaExpress. All Rights Reserved.
Design by GreyCrust Solutions