ಬ್ರಹ್ಮಾವರ: ತಾಲೂಕಿನ ಮೂಡುಗಿಳಿಯಾರು ನಿವಾಸಿ ಚೆನ್ನ ಪೂಜಾರಿ (52) ಅವರು ಕಳೆದ ಏಳು ತಿಂಗಳಿನಿಂದ ನಾಪತ್ತೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿದೆ.
ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಬಳಿಕ ಮನೆಗೆ ಮರಳದೆ ಕಾಣೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಅವರ ಎತ್ತರ 5 ಅಡಿ 4 ಇಂಚು, ಕೋಲು ಮುಖ, ಗೋಧಿ ಮೈಬಣ್ಣ ಹಾಗೂ ಸಾಧಾರಣ ಶರೀರ ಹೊಂದಿದ್ದಾರೆ. ಅವರು ಕಿವುಡ ಹಾಗೂ ಮೂಗರಾಗಿರುವುದು ಗುರುತಿನ ವಿಶೇಷ ಲಕ್ಷಣವಾಗಿದೆ.
ಈ ವ್ಯಕ್ತಿಯ ಕುರಿತು ಯಾವುದೇ ಮಾಹಿತಿ ದೊರೆತಲ್ಲಿ ಸಮೀಪದ ಪೊಲೀಸ್ ಠಾಣೆಗೆ ಅಥವಾ ಕೋಟ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ 0820-2564155, ಮೊಬೈಲ್ ಸಂಖ್ಯೆ 9480805454 ಹಾಗೂ ಉಡುಪಿ ವೃತ್ತ ನಿರೀಕ್ಷಕರ ಕಚೇರಿ ದೂರವಾಣಿ ಸಂಖ್ಯೆ 0820-2561966, ಮೊಬೈಲ್ ಸಂಖ್ಯೆ 9480805432 ಅನ್ನು ಸಂಪರ್ಕಿಸುವಂತೆ ಕೋಟ ಪೊಲೀಸ್ ಠಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲEditor Kannada Express 1st Floor, Raaj Towers Udupi - 576101
+919008424891
Kannadaexpress@gmail.com
© 2025 KannadaExpress. All Rights Reserved.
Design by GreyCrust Solutions