ಸ್ವಸ್ಥ ನಾರಿ ಸಶಕ್ತ ಪರಿವಾರ ಅಭಿಯಾನದ ಅಂಗವಾಗಿ ಜಿಲ್ಲಾ ಆಸ್ಪತ್ರೆ ಉಡುಪಿ ಹಾಗೂ ಎಂ.ಸಿ.ಕೆ.ಎಸ್- ಫುಡ್ ಫಾರ್ ದಿ ಹಂಗ್ರಿ ಫೌಂಡೇಶನ್ ವತಿಯಿಂದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 17 ಬಡ ಕ್ಷಯ ರೋಗಿಗಳಿಗೆ ಅಕ್ಕಿ, ಬೇಳೆ, ಅಡುಗೆ ಎಣ್ಣೆ ಹಾಗೂ ಸಿರಿಧಾನ್ಯ ಸೇರಿದಂತೆ ದಿನನಿತ್ಯ ಬಳಸುವ ಅಡುಗೆ ಪದಾರ್ಥಗಳ ಆಹಾರದ ಕಿಟ್ ಗಳನ್ನು ಉಚಿತವಾಗಿ ನೀಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಸರ್ಜನ್ ಡಾ.ಹೆಚ್ ಅಶೋಕ್, ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥಗಳನ್ನು ಉಚಿತವಾಗಿ ನೀಡುವುದರಿಂದ ಬಡ ರೋಗಿಗಳಿಗೆ ಸಹಾಯವಾಗುವ ಜೊತೆಗೆ ಅವರಿಗೆ ಮಾನಸಿಕ ಧೈರ್ಯ ತುಂಬಿದಂತಾಗುತ್ತದೆ. ಈ ಕಾರ್ಯದಿಂದ ಇತರರಿಗೆ ಪ್ರೋತ್ಸಾಹ ನೀಡಿದಂತಾಗುತ್ತದೆ. ಕೇವಲ ಸರಕಾರ ಮಾತ್ರವಲ್ಲದೆ ಸಂಘ ಸಂಸ್ಥೆಗಳೂ ಈ ಕಾರ್ಯದಲ್ಲಿ ಸಹಕಾರ ನೀಡಿದಲ್ಲಿ ಕ್ಷಯ ರೋಗವನ್ನು ನಿರ್ಮೂಲನೆ ಮಾಡಲು ಸಾಧ್ಯವಾಗುತ್ತದೆ ಎಂದರು. ಕಾರ್ಯಕ್ರಮದಲ್ಲಿ ನಿವಾಸಿ ವೈದ್ಯಾಧಿಕಾರಿ ಡಾ. ವಾಸುದೇವ ಎಸ್., ಎಂ.ಸಿ.ಕೆ.ಎಸ್ ಮುಖ್ಯಸ್ಥೆ ನಿಧಿ ಹಾಗೂ ಆಸ್ಪತ್ರೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ© 2025 KannadaExpress. All Rights Reserved.
Design by GreyCrust Solutions