Advertisement

ವೈದ್ಯರ ದಿನಾಚರಣೆ: ಮುದರಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಸೌಮ್ಯ ಕೆ ಅವರಿಗೆ ಲಯನ್ಸ್ ಕ್ಲಬ್‌ನಿಂದ ಸನ್ಮಾನ

ವೈದ್ಯರ ದಿನಾಚರಣೆಯ ಅಂಗವಾಗಿ ಲಯನ್ಸ್ ಕ್ಲಬ್ ಮುದರಂಗಡಿ ವತಿಯಿಂದ ಮುದರಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಸೌಮ್ಯ ಕೆ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಸನ್ಮಾನ ಸ್ವೀಕರಿಸಿದ ಬಳಿಕ ಮಾತನಾಡಿದ ಡಾ. ಸೌಮ್ಯ ಕೆ ಅವರು, ಇಂದಿನ ಕಾಲಘಟ್ಟದಲ್ಲಿ ಜನರು ಮೊಬೈಲ್ ಬಳಕೆಯನ್ನು ಮಿತಿಗೊಳಿಸಿ, ಪ್ರತಿದಿನ ವ್ಯಾಯಾಮ ಮಾಡುವ ಅಭ್ಯಾಸ ಬೆಳೆಸಿಕೊಳ್ಳಬೇಕು. ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಂಡು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಕರೆ ನೀಡಿದರು.

ಲಯನ್ಸ್ ಕ್ಲಬ್ ಮುದರಂಗಡಿ ಅಧ್ಯಕ್ಷ ರಿಯಾಜ್ ಮುದರಂಗಡಿ ಅವರು ವೈದ್ಯರ ದಿನಾಚರಣೆಯ ಶುಭಾಶಯಗಳನ್ನು ತಿಳಿಸಿ, ಸಮಾಜದ ಆರೋಗ್ಯ ಕಾಪಾಡುವಲ್ಲಿ ವೈದ್ಯರ ಸೇವೆ ಅಮೂಲ್ಯವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮುದರಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಎಲ್ಲಾ ಸಿಬ್ಬಂದಿ, ಲಯನ್ಸ್ ಕ್ಲಬ್‌ನ ನಿಯೋಜಿತ ಅಧ್ಯಕ್ಷ ವಿನ್ಸೆಂಟ್ ಡಿಸೋಜಾ, ಕಾರ್ಯದರ್ಶಿ ಲಾರೆನ್ಸ್ ಡಿಸೋಜಾ, ಖಜಾಂಚಿ ಫೆಲಿಕ್ಸ್ ಡಿಸೋಜಾ ಹಾಗೂ ಸದಸ್ಯರಾದ ಫಿಲಿಪ್ ಫೆಲಿಕ್ಸ್ ಡಿಸೋಜಾ, ರಾಜೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

KannadaExpress

Advertisement

ವಾರ್ತಾಪತ್ರಿಕೆ ಚಂದಾದಾರಿಕೆ

ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ

ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ
Get In Touch

Editor Kannada Express 1st Floor, Raaj Towers Udupi - 576101

+919008424891

Kannadaexpress@gmail.com

Follow Us
Advertisements

© 2025 KannadaExpress. All Rights Reserved.
Design by GreyCrust Solutions