ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಉಡುಪಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆಯನ್ನು ಮಂಗಳವಾರ ಆಚರಿಸಲಾಯಿತು.
ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಯಲ್ಲಮ್ಮ ಉದ್ಘಾಟಿಸಿ ಮಾತನಾಡಿ, ಸಂವಿಧಾನ ಶಿಲ್ಪಿ, ಮಹಾಮಾನವತಾವಾದಿ ಹಾಗೂ ಸಾಮಾಜಿಕ ಬದಲಾವಣೆಯ ಹರಿಕಾರರಾದ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ಜೀವನ ಸಾಧನೆಗಳನ್ನು ಸ್ಮರಿಸಿದರು. ಅವರ ಜನನ, ಶಿಕ್ಷಣ, 64 ವಿಷಯಗಳಲ್ಲಿ ಪಾಂಡಿತ್ಯ, 34 ಪದವಿಗಳನ್ನು ಪಡೆದುಕೊಂಡ ಸಾಧನೆ, ವಿದೇಶದಲ್ಲಿ ಪಿಎಚ್‌ಡಿ ಮಾಡಿ ಡಾಕ್ಟರೇಟ್ ಪಡೆದ ಮೊದಲ ಭಾರತೀಯರಾಗಿರುವ ಮಹತ್ವವನ್ನು ವಿವರಿಸಿದರು.
ಇದೇ ವೇಳೆ ಹಿಂದೂ ಕೋಡ್ ಬಿಲ್, ಮಹಿಳಾ ಸ್ವಾತಂತ್ರ್ಯ, ಸಮಾನ ಶಿಕ್ಷಣ ಮತ್ತು ಸ್ವತಂತ್ರ ಭಾರತದ ಮೊದಲ ಕಾನೂನು ಸಚಿವರಾಗಿ ನೀಡಿದ ಕೊಡುಗೆಗಳ ಕುರಿತು ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಕಚೇರಿಯ ದೈಹಿಕ ಶಿಕ್ಷಣ ಪರಿವೀಕ್ಷಕರು, ಸಿಬ್ಬಂದಿ ವರ್ಗದವರು, ಬಿಆರ್‌ಸಿ ಸಮನ್ವಯಾಧಿಕಾರಿ ಶೇಖರ ಬೋವಿ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಭಾರತ ಸೇವಾದಳದ ಪುಷ್ಪಲತಾ ಕೂಡ ಭಾಗವಹಿಸಿದ್ದರು.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲEditor Kannada Express 1st Floor, Raaj Towers Udupi - 576101
+919008424891
Kannadaexpress@gmail.com
© 2025 KannadaExpress. All Rights Reserved.
Design by GreyCrust Solutions