ಉಡುಪಿ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆಯನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಗೌರವದಿಂದ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಮಾಜಿ ಸಚಿವರು ಹಾಗೂ ಕೆಪಿಸಿಸಿ ಪ್ರಚಾರ ಸಮಿತಿಯ ರಾಜ್ಯಾಧ್ಯಕ್ಷರಾದ ವಿನಯ್ ಕುಮಾರ್ ಸೊರಕೆ ಮಾತನಾಡಿ, ಕೇಂದ್ರ ಚುನಾವಣಾ ಆಯೋಗವು SIR ಜಾರಿ ಮಾಡುವ ಮೂಲಕ ಅಂಬೇಡ್ಕರ್ ರಚಿಸಿದ ಸಂವಿಧಾನದ ಮೌಲ್ಯಗಳಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ ಎಂದು ಆರೋಪಿಸಿದರು. ಇದೇ ವೇಳೆ, ಅಂಬೇಡ್ಕರ್ ಅವರು ಭಾರತ ದೇಶಕ್ಕೆ ನೀಡಿದ ವಿಶ್ವದ ಅತ್ಯಂತ ಶ್ರೇಷ್ಠ ಸಂವಿಧಾನದ ಮಹತ್ವವನ್ನು ವಿವರಿಸಿದರು.
ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣಕಾರರಾದ ಪ್ರೊ ಗಣನಾಥ ಎಕ್ಕಾರ್ ಅಂಬೇಡ್ಕರ್ ಅವರ ಜೀವನ ಮತ್ತು ಸಾಧನೆಗಳ ಬಗ್ಗೆ ವಿಸ್ತಾರವಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಅಶೋಕ್ ಕುಮಾರ್ ಕೊಡವೂರು, ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಶರ್ಫುದ್ದೀನ್ ಶೇಖ್, ಶ್ರೀ ಹರಿಪ್ರಸಾದ್ ರೈ, ಹಾಜಿ, ಡಾ. ಶೇಖ್ ವಹೀದ್ ದಾವೂದ್, ಫಾದರ್ ವಿಲಿಯಮ್ ಮಾರ್ಟಿಸ್, ಪ್ರಶಾಂತ್ ಜತ್ತನ್ನ, ಜ್ಯೋತಿ ಹೆಬ್ಬಾರ್, ಹರೀಶ್ ಕಿಣಿ, ಜಯಕುಮಾರ್, ನಾಗೇಶ್ ಉದ್ಯಾವರ ಸೇರಿದಂತೆ ಅನೇಕ ನಾಯಕರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.


ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲEditor Kannada Express 1st Floor, Raaj Towers Udupi - 576101
+919008424891
Kannadaexpress@gmail.com
© 2025 KannadaExpress. All Rights Reserved.
Design by GreyCrust Solutions