Advertisement

ಬೆಂಗಳೂರಿನಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರಿಂದ ಮೆಟ್ರೋ 3 ನೇ ಹಂತದ ಯೋಜನೆಗೆ ಶಂಕು ಸ್ಥಾಪನೆ

ರಾಜ್ಯ ರಾಜಧಾನಿಯ ಬಹುನಿರೀಕ್ಷಿತ ನಮ್ಮ ಮೆಟ್ರೋ ಆರ್‌.ವಿ.ರಸ್ತೆ- ಬೊಮ್ಮಸಂದ್ರ ಮಾರ್ಗದಲ್ಲಿ (ಹಳದಿ ರಸ್ತೆ) ರೈಲು ಸಂಚಾರಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ ಹಸಿರು ನಿಶಾನೆ ತೋರಿದ್ದು, ಈ ಮಾರ್ಗದಲ್ಲಿ ಸೋಮವಾರದಿಂದ ವಾಣಿಜ್ಯ ಸಂಚಾರ ಶುರುವಾಗಲಿದೆ.

ಹಳದಿ ಮಾರ್ಗಕ್ಕೆ ಚಾಲನೆ ನೀಡಿದ ಬಳಿಕ ಮೋದಿಯವರು, ಇದೇ ಮೆಟ್ರೋ ರೈಲಿನಲ್ಲಿ ಎಲೆಕ್ಟ್ರಾನಿಕ್ ಸಿಟಿ ಮೆಟ್ರೋ ಸ್ಟೇಷನ್​ವರೆಗೆ ಸಂಚಾರ ಆರಂಭಿಸಿದ್ದಾರೆ.

ಈ ಮೆಟ್ರೋ ರೈಲನ್ನು ಮಹಿಳಾ ಲೋಕೋ ಪೈಲಟ್ ವಿನುತಾ ಅವರು ಚಾಲನೆ ಮಾಡುತ್ತಿದ್ದು, ಮೋದಿಯವರೊಂದಿಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್​ ಸೇರಿ 117 ಜನರು ಪ್ರಯಾಣ ನಡೆಸಿದ್ದಾರೆ.

ಮೋದಿಯವರೊಂದಿಗೆ ಎಂಟು ಜನ ಮಕ್ಕಳು, ಎಂಟು ಮಂದಿ ಮೆಟ್ರೋ ಉದ್ಯೋಗಿಗಳು, ಸರ್ಕಾರಿ ಪ್ರೌಢಶಾಲೆಯ ​16 ವಿದ್ಯಾರ್ಥಿಗಳು, ಆರ್.ವಿ ರೋಡ್ ಟು ಬೊಮ್ಮಸಂದ್ರ ಯೆಲ್ಲೋ ಲೈನ್ ಮಾರ್ಗದಲ್ಲಿ ಕೆಲಸ ಮಾಡಿದ ಎಂಟು ಕಾರ್ಮಿಕರು ಮತ್ತು 8 ಜನಸಾಮಾನ್ಯರು ಸಂಚಾರ ನಡೆಸಿದ್ದಾರೆ.

KannadaExpress

Advertisement

ವಾರ್ತಾಪತ್ರಿಕೆ ಚಂದಾದಾರಿಕೆ

ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ

ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ
Get In Touch

Udupi

9985974521

Kannadaexpress@gmail.com

Follow Us
Advertisements

© 2025 KannadaExpress. All Rights Reserved.
Design by GreyCrust Solutions