ರಿಫಾ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ (RIFAH) ಉಡುಪಿ ಘಟಕದ ವತಿಯಿಂದ ವಿಶೇಷ ಸಭೆ ಇಂದು ನಗರದ ಹಾಶ್ನಿ ಮಸೀದಿಯ ಸಭಾಂಗಣದಲ್ಲಿ ನಡೆಯಿತು.
ರಿಫಾ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ ರಾಷ್ಟ್ರೀಯ ಮುಖ್ಯಸ್ಥರು ಹಾಗೂ ಖ್ಯಾತ ಇಸ್ಲಾಮಿಕ್ ಪಂಡಿತರಾದ ಎಸ್ ಅಮೀನುಲ್ ಹಸನ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಉದ್ಯಮ, ನೈತಿಕತೆ ಮತ್ತು ಸಮುದಾಯಾಭಿವೃದ್ಧಿ ಕುರಿತಾಗಿ ಮಾತನಾಡಿದರು.

ವ್ಯವಹಾರದಲ್ಲಿ ನೈತಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳುವ ಅಗತ್ಯತೆಯನ್ನು ಒತ್ತಿ ಹೇಳಿದರು. ಸಸ್ಥಿರ ಅಭಿವೃದ್ಧಿ, ಆರ್ಥಿಕ ಸ್ವಾವಲಂಬನೆ ಹಾಗೂ ಯುವ ಉದ್ಯಮಿಗಳಿಗೆ ಮಾರ್ಗದರ್ಶನದ ಅಗತ್ಯತೆ ಕುರಿತು ಚರ್ಚೆ ನಡೆಯಿತು.
ರಿಫಾ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ ಉಡುಪಿ ಘಟಕದ ಅಧ್ಯಕ್ಷರಾದ ಆಸೀಫ್ ಇಕ್ಬಾಲ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸದಸ್ಯರಾದ ಇಸಾಕ್ ಕಿದಿಯೂರು ಪ್ರಾಸ್ತಾವಿಕವಾಗಿ ಮಾತನಾಡಿದರು. ಫೈಝ್ ಅಹಮದ್ ಕುರ್ ಆನ್ ಪಠಿಸಿದರು. ಝಹೀರ್ ಮಣಿಪಾಲ್ ಕಾರ್ಯಕ್ರಮ ನಿರೂಪಿಸಿದರು.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲEditor Kannada Express 1st Floor, Raaj Towers Udupi - 576101
+919008424891
Kannadaexpress@gmail.com
© 2025 KannadaExpress. All Rights Reserved.
Design by GreyCrust Solutions