ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ಎಂ.ಜಿ.ಎನ್.ಆರ್.ಇ.ಜಿ.ಎ) ಹಿಂತೆಗೆತದ ವಿರುದ್ಧ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಫೆಬ್ರವರಿ 24ರಂದು ಮಣಿಪಾಲದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
2005ರಲ್ಲಿ ಅಂದಿನ ಯುಪಿಎ ಸರ್ಕಾರ ಜಾರಿಗೆ ತಂದ ಮನರೇಗಾ ಯೋಜನೆ ಗ್ರಾಮೀಣ ಬಡವರ ಬದುಕಿಗೆ ಆಸರೆಯಾಗಿದ್ದು, ಅದನ್ನು ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರ ಹಿಂತೆಗೆದುಕೊಂಡಿರುವ ಜನವಿರೋಧಿ ಕ್ರಮವನ್ನು ಖಂಡಿಸಿ ಈ ಪ್ರತಿಭಟನೆ ಆಯೋಜಿಸಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ತಿಳಿಸಿದೆ.
ಅಂದು ಬೆಳಿಗ್ಗೆ 10 ಗಂಟೆಗೆ ಮಣಿಪಾಲದ ಕಾಯಿನ್ ಸರ್ಕಲ್‌ನಿಂದ ಪಾದಯಾತ್ರೆ ಆರಂಭವಾಗಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ, ಜಿಲ್ಲಾಧಿಕಾರಿಗಳ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು. ಉದ್ಯೋಗ ಖಾತ್ರಿ ಯೋಜನೆಯನ್ನು ಉಳಿಸಿಕೊಳ್ಳಲು ಹಾಗೂ ಕಾರ್ಮಿಕರ ಹಿತದೃಷ್ಟಿಯಿಂದ ಈ ಪ್ರತಿಭಟನೆ ನಡೆಸಲಾಗುತ್ತಿದೆ.
ಪ್ರತಿಭಟನೆಯಲ್ಲಿ ಕರ್ನಾಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭಾಗವಹಿಸಲಿದ್ದು, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ, ಕೆಪಿಸಿಸಿ ಉಪಾಧ್ಯಕ್ಷ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಐವನ್ ಡಿ’ಸೋಜಾ, ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ, ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ. ಗಫೂರ್, ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ ಪೂಜಾರಿ ಮುದ್ರಾಡಿ, ಮಾಜಿ ಶಾಸಕರು ಗೊಪಾಲ ಪೂಜಾರಿ ಮತ್ತು ಸುಕುಮಾರ್ ಶೆಟ್ಟಿ ಸೇರಿದಂತೆ ಹಲವು ಮುಖಂಡರು ಭಾಗವಹಿಸಲಿದ್ದಾರೆ.
ಬ್ಲಾಕ್ ಅಧ್ಯಕ್ಷರು, ಮುಂಚೂಣಿ ಘಟಕಗಳ ಜಿಲ್ಲಾ ಅಧ್ಯಕ್ಷರು, ಪಕ್ಷದ ಎಲ್ಲಾ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲEditor Kannada Express 1st Floor, Raaj Towers Udupi - 576101
+919008424891
Kannadaexpress@gmail.com
© 2025 KannadaExpress. All Rights Reserved.
Design by GreyCrust Solutions