ಧರ್ಮಸ್ಥಳದಲ್ಲಿ ನಡೆಯುತ್ತಿದ್ದ ಅಸಹಜ ಸಾವಿನ ಪ್ರಕರಣ, ಬೆಚ್ಚಿಬೀಳಿಸುವ ಸರಣಿ ಕುಕೃತ್ಯದ ಬಗ್ಗೆ ಈ ಹಿಂದೆ ಸ್ವಚ್ಛತಾ ಕಾರ್ಮಿಕನಾಗಿ ದುಡಿಯುತ್ತಿದ್ದ ವ್ಯಕ್ತಿ ಪ್ರಾಯಶ್ಚಿತ್ತಗೊಂಡು ದೂರು ನೀಡಲು ಮುಂದೆ ಬಂದಿದ್ದು, ಒಟ್ಟಾರೆ ಘಟನೆಯ ಬಗ್ಗೆ ವಿಶೇಷ ತನಿಖಾ ತಂಡ (ಎಸ್ ಐಟಿ) ತನಿಖೆ ನಡೆಸುತ್ತಿದೆ.
ಸರಾಗವಾಗಿ ತನಿಖೆ ನಡೆಯುತ್ತಿರುವ ಹೊತ್ತಿನಲ್ಲಿ ಧಾರ್ಮಿಕ ಭಾವನೆಯನ್ನು ಕೆರಳಿಸಿ ಘಟನೆಯನ್ನು ಹಿಂದೂ -ಮುಸ್ಲಿಂ ರೀತಿ ಚಿತ್ರಿಸಿ ಜಿಲ್ಲೆಯಲ್ಲಿ ಕೋಮುಗಲಭೆ ಎಬ್ಬಿಸಿ ಒಟ್ಟಾರೆ ತನಿಖೆಯ ಹಾದಿಯನ್ನು ದಿಕ್ಕು ತಪ್ಪಿಸುವ ವ್ಯವಸ್ಥಿತ ಷಡ್ಯಂತ್ರ ಕೂಡ ತೆರೆಮರೆಯಲ್ಲಿ ನಡೆಯುತ್ತಿದೆ. ಇದೀಗ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಧರ್ಮಸ್ಥಳ ಪ್ರಕರಣದ ಬಗ್ಗೆ ಧಾರ್ಮಿಕ ಭಾವನೆ ಕೆರಳಿಸಿ ಧರ್ಮ ಧರ್ಮಗಳ ನಡುವೆ ದ್ವೇಷ ಭಾವನೆ ಮೂಡಿಸಿ, ಸಮುದಾಯಗಳ ನಡುವೆ ವೈಮನಸ್ಸು ಮೂಡುವಂತೆ ಬರಹ ಪ್ರಕಟಿಸಿದ ವಸಂತ್ ಗಿಳಿಯಾರ್ ವಿರುದ್ಧ ಸಾಮಾಜಿಕ ಮುಖಂಡ ಶೇಖರ್ ಲಾಯಿಲ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ© 2025 KannadaExpress. All Rights Reserved.
Design by GreyCrust Solutions