Advertisement

ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಅವ್ಯವಸ್ಥೆಯನ್ನು ಕೂಡಲೇ ಸರಿಪಡಿಸಿ : ಕರವೇ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ

ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಅವ್ಯವಸ್ಥೆಯನ್ನು ಸರಿಪಡಿಸುವoತೆ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ಜಿಲ್ಲಾಧ್ಯಕ್ಷರಾದ ಸುಜಯ್ ಪೂಜಾರಿ ಆಗ್ರಹಿಸಿದ್ದಾರೆ.

ಉಡುಪಿ ನಗರದ ಸರ್ವಿಸ್ ಬಸ್ ನಿಲ್ದಾಣಕ್ಕೆ ಸಾವಿರಾರು ಪ್ರಯಾಣಿಕರು ಆಗಮಿಸುತ್ತಾರೆ. ಆದರೆ ಬಸ್ ನಿಲ್ದಾಣ ಮಾತ್ರ ಅವ್ಯವಸ್ಥೆಯ ಆಗರವಾಗಿದೆ.

ಬಸ್ ನಿಲ್ದಾಣದಲ್ಲಿ ಯಾವುದೇ ಮೂಲ ಸೌಕರ್ಯಗಳಿಲ್ಲದೇ ಇರುವುದರಿಂದ ಪ್ರಯಾಣಿಕರು ಪರದಾಡುತ್ತಿದ್ದಾರೆ. ಕುಡಿಯುವ ನೀರಿನ ಘಟಕ ಶುಚಿತ್ವವಿಲ್ಲದೇ ಪ್ರಯಾಣಿಕರು ದುಡ್ಡು ಕೊಟ್ಟು ನೀರು ಕುಡಿಯಬೇಕಾದ ಪರಿಸ್ಥಿತಿ ಎದುರಾಗಿದೆ. ಪ್ರಯಾಣಿಕರು ಕುಳಿತುಕೊಳ್ಳುವ ಕೆಲವೊಂದು ಕುರ್ಚಿ ಮುರಿದು ಬಿದ್ದಿದ್ದು, ಆಸನದ ವ್ಯವಸ್ಥೆ ಇಲ್ಲದೆ ಪ್ರಯಾಣಿಕರು ಪರದಾಡುತ್ತಿದ್ದಾರೆ.

ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಅನೂಕೂಲಕ್ಕಾಗಿ ಮಹಿಳೆಯರಿಗೆ ಹಾಗೂ ಪುರುಷರಿಗೆ ಪ್ರತ್ಯೇಕ ಶೌಚಾಲಯ ನಿರ್ಮಾಣ ಮಾಡಿದ್ದರೂ ನಿರುಪಯುಕ್ತವಾಗಿವೆ. ಶೌಚಾಲಯದ ಕಾಮಗಾರಿ ಕಳಪೆಯಾಗಿದೆ. ಸುತ್ತ ಮುತ್ತಲ ಪ್ರದೇಶದಲ್ಲಿ ದುರ್ವಾಸನೆ ಬೀರುತ್ತಿದೆ. ಈ ಸಮಸ್ಯೆಯಿಂದ ನಿಲ್ದಾಣದಲ್ಲಿ ಪ್ರಯಾಣಿಕರು ಕುಳಿತುಕೊಳ್ಳಲು ಹಿಂದೇಟು ಹಾಕುವಂತಾಗಿದೆ. ಬಸ್ ನಿಲ್ದಾಣದ ಧೂಳುಮಯ ಅವರಣ ಮುಂತಾದವುಗಳಿಂದ ಪ್ರಯಾಣಿಕರಿಗೆ ಸಮಸ್ಯೆ ಎದುರಾಗಿದೆ.

ಬಸ್ ನಿಲ್ದಾಣದಲ್ಲಿ ಅಲ್ಲಲ್ಲಿ ಕಸದ ರಾಶಿ ತಿಂಡಿ ಪೊಟ್ಟಣಗಳು ಬಿದ್ದಿರುವುದನ್ನು ದಿನನಿತ್ಯ ನೋಡಬಹುದು. ಅದೇ ಕಸದ ರಾಶಿಯ ಮದ್ಯೆ ಜನರು ನಿಂತಿರಬೇಕು. ಅಧಿಕಾರಿಗಳು ಸಾರ್ವಜನಿಕರಿಗೆ ಅವಶ್ಯವಿರುವ ಮೂಲ ಸೌಕರ್ಯಗಳನ್ನು ಒದಗಿಸದೆ ಜಾಣ ಕುರುಡು ಪ್ರದರ್ಶಿಸುತ್ತಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ. ಒಟ್ಟಿನಲ್ಲಿ ಬಸ್ ನಿಲ್ದಾಣದ ಅವ್ಯವಸ್ಥೆಗೆ ಪ್ರಯಾಣಿಕರು ನಿತ್ಯ ಹಿಡಿಶಾಪ ಹಾಕುತ್ತಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಎಚ್ಛೆತ್ತುಕೊಂಡರೆ ತಕ್ಷಣ ಬಸ್ ನಿಲ್ದಾಣ ದುರಸ್ತಿ ಕಾಣಬಹುದು.

ಈ ಎಲ್ಲಾ ಅವ್ಯವಸ್ಥೆಯನ್ನು ನಗರಸಭೆ ಸರಿಪಡಿಸಬೇಕು ಎಂದು ಅಧಿಕಾರಿಗಳನ್ನು ಕರವೇ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ ಆಗ್ರಹಿಸಿದ್ದಾರೆ.

KannadaExpress

Advertisement

ವಾರ್ತಾಪತ್ರಿಕೆ ಚಂದಾದಾರಿಕೆ

ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ

ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ
Get In Touch

Editor Kannada Express 1st Floor, Raaj Towers Udupi - 576101

+919008424891

Kannadaexpress@gmail.com

Follow Us
Advertisements

© 2025 KannadaExpress. All Rights Reserved.
Design by GreyCrust Solutions