Advertisement

ಆದಿವುಡುಪಿಯಲ್ಲಿ ಉಚಿತ ನೇತ್ರ ತಪಾಸಣೆ ಹಾಗೂ ಕನ್ನಡಕ ವಿತರಣಾ ಶಿಬಿರ

ಉಡುಪಿ: ಯುವಬಂಟರ ಸಂಘ (ರಿ.) ಕಂಬಳಕಟ್ಟ–ಕೊಡವೂರು, ಜೆಎಸ್‌ಡಬ್ಲ್ಯೂ ಫೌಂಡೇಶನ್ ಮಂಗಳೂರು, ಲಯನ್ಸ್ ಕ್ಲಬ್ ಉಡುಪಿ–ಚೇತನ ಹಾಗೂ ಆದಿವುಡುಪಿ ಹಿರಿಯ ಪ್ರಾಥಮಿಕ ಶಾಲೆಯ ಆಶ್ರಯದಲ್ಲಿ, ಇಂಡಿಯಾ ವಿಷನ್ ಇನ್ಸ್ಟಿಟ್ಯೂಟ್ ಸಹಯೋಗದೊಂದಿಗೆ ಉಚಿತ ನೇತ್ರ ತಪಾಸಣೆ ಹಾಗೂ ಕನ್ನಡಕ ವಿತರಣಾ ಕಾರ್ಯಕ್ರಮವು ಫೆಬ್ರವರಿ 15ರಂದು ಭಾನುವಾರ ಆದಿವುಡುಪಿ ಶಾಲೆಯಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮಂಗಳೂರು ಪ್ರಧಾನ ಕಾರ್ಯದರ್ಶಿ ಜಯಕರ್ ಶೆಟ್ಟಿ ಇಂದ್ರಾಳಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, “ನಾವು ವಾಹನಗಳ ತಪಾಸಣೆಯನ್ನು ನಿಯಮಿತವಾಗಿ ಮಾಡುವಂತೆ, ದೇಹವೆಂಬ ವಾಹನಕ್ಕೂ ಅವಧಿ ಅವಧಿಗೆ ತಪಾಸಣೆ ಅಗತ್ಯ. ಅದರಲ್ಲೂ ಕಣ್ಣಿನ ಆರೋಗ್ಯ ಪರೀಕ್ಷೆ ಅತ್ಯಂತ ಮುಖ್ಯ,” ಎಂದು ತಿಳಿಸಿದರು. ಇಂತಹ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡ ಆಯೋಜಕರನ್ನು ಅಭಿನಂದಿಸಿ, ಮುಂದಿನ ದಿನಗಳಲ್ಲೂ ಈ ರೀತಿಯ ಸೇವಾಕಾರ್ಯಗಳು ನಿರಂತರವಾಗಿ ನಡೆಯಲಿ ಎಂದು ಆಶಿಸಿದರು.

ಕಾರ್ಯಕ್ರಮದಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಮೋಘ್ ಎಸ್. ರಾವ್ (ಕಂಬಳಕಟ್ಟ) ಅವರ ಬಹುಮುಖ ಪ್ರತಿಭೆಯನ್ನು ಗುರುತಿಸಿ ಸರ್ವರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು. ಸುಮಾರು 150ಕ್ಕೂ ಹೆಚ್ಚು ಶಿಬಿರಾರ್ಥಿಗಳು ಭಾಗವಹಿಸಿದ ಈ ಶಿಬಿರದಲ್ಲಿ ಅರ್ಹ ಫಲಾನುಭವಿಗಳಿಗೆ ಉಚಿತವಾಗಿ ಕನ್ನಡಕಗಳನ್ನು ವಿತರಿಸಲಾಯಿತು.

ಯುವಬಂಟರ ಸಂಘ (ರಿ.) ಕಂಬಳಕಟ್ಟ–ಕೊಡವೂರು ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ ಕೆ. ಅಧ್ಯಕ್ಷತೆ ವಹಿಸಿದ್ದರು. ಜೆಎಸ್‌ಡಬ್ಲ್ಯೂ ಮಂಗಳೂರು ವ್ಯಾಪಾರ ಅಭಿವೃದ್ಧಿ ಮತ್ತು ಮಾರ್ಕೆಟಿಂಗ್ ಜನರಲ್ ಮ್ಯಾನೇಜರ್ ದಿಲೀಪ್ ಶೆಟ್ಟಿ, ಉಪ ವ್ಯವಸ್ಥಾಪಕ ಪ್ರದೀಪ್ ಕೆ.ಆರ್., ಜಿಲ್ಲೆ 317ಸಿ ಪ್ರಾಂತ್ಯ–2 ಲಯನ್ ಪ್ರಾಂತ್ಯ ಅಧ್ಯಕ್ಷ ಎಂಜೆಎಫ್ ಅರುಣ್ ಕುಮಾರ್ ಶೆಟ್ಟಿ, ಆದಿವುಡುಪಿ ಶಿಕ್ಷಣ ಸಮಿತಿಯ ಕಾರ್ಯದರ್ಶಿ ಟಿ.ಕೆ. ಗಣೇಶ್ ರಾವ್, ಲಯನ್ಸ್ ಕ್ಲಬ್ ಉಡುಪಿ–ಚೇತನ ಅಧ್ಯಕ್ಷ ಸಂತೋಷ್ ಶೆಟ್ಟಿ ಪಂಚರತ್ನ, ಇಂಡಿಯಾ ವಿಷನ್ ಸಂಸ್ಥೆಯ ವೈದ್ಯರಾದ ಡಾ. ಶಿಲ್ಪಾ ಹಾಗೂ ಡಾ. ಸ್ವಾತಿ, ಯುವಬಂಟರ ಸಂಘದ ಗೌರವಾಧ್ಯಕ್ಷೆ ಅಶ್ವಿನಿ ಶೆಟ್ಟಿ ಸಂತೆಕಟ್ಟೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಶ್ರೀಮತಿ ಸೌಮ್ಯ ಶೆಟ್ಟಿ ಗರ್ಡೆ ಪ್ರಾರ್ಥನೆಗೈದರು. ಪುಷ್ಪರಾಜ್ ಶೆಟ್ಟಿ ಕೆ. ಸ್ವಾಗತಿಸಿದರು. ಸುರೇಶ್ ಶೆಟ್ಟಿ ಕಂಬಳಕಟ್ಟ ವಂದಿಸಿದರು. ಲಯನ್ ಪ್ರವೀಣ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

KannadaExpress

Advertisement

ವಾರ್ತಾಪತ್ರಿಕೆ ಚಂದಾದಾರಿಕೆ

ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ

ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ
Get In Touch

Editor Kannada Express 1st Floor, Raaj Towers Udupi - 576101

+919008424891

Kannadaexpress@gmail.com

Follow Us
Advertisements

© 2025 KannadaExpress. All Rights Reserved.
Design by GreyCrust Solutions