Advertisement

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ: ಹಠಾತ್ ಪ್ರವಾಹಕ್ಕೆ ಮನೆ ಕುಸಿತ- ಐವರ ಸಾವು

ಹಿಮಾಚಲ ಪ್ರದೇಶದಾದ್ಯಂತ ಮಂಗಳವಾರ ಸುರಿದ ಧಾರಾಕಾರ ಮಳೆಯಿಂದಾಗಿ ಭೂಕುಸಿತ ಮತ್ತು ದಿಢೀರ್ ಪ್ರವಾಹ ಉಂಟಾಗಿ ಮನೆ ಕುಸಿದು ಐದು ಜನರು ಸಾವನ್ನಪ್ಪಿದ್ದಾರೆ. ನಾಲ್ಕು ರಾಷ್ಟ್ರೀಯ ಹೆದ್ದಾರಿಗಳು ಸೇರಿದಂತೆ 1,337 ರಸ್ತೆಗಳಲ್ಲಿ ಸಂಚಾರ ಸ್ಥಗಿತಗೊಂಡಿದೆ.

ಕಾಂಗ್ರಾ, ಮಂಡಿ, ಸಿರಮೌರ್ ಮತ್ತು ಕಿನ್ನೌರ್ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಸ್ಥಳೀಯ ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್ ಘೋಷಿಸಿದೆ. ಉನಾ ಮತ್ತು ಬಿಲಾಸ್ಪುರ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ನೀಡಿದೆ.

ಸೋಲನ್ ಜಿಲ್ಲೆಯ ಸ್ಯಾಮ್ಲೋ ಗ್ರಾಮದಲ್ಲಿ, ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಮನೆ ಕುಸಿದು ಬಿದ್ದು, ಅವಶೇಷಗಳಡಿ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಹೇಮಲತಾ ಎಂದು ಗುರುತಿಸಲಾಗಿದೆ. ಮತ್ತೊಂದು ಘಟನೆಯಲ್ಲಿ, ಕುಲ್ಲುವಿನ ಧಲ್ಪುರದಲ್ಲಿ ಮನೆಯ ಅವಶೇಷಗಳಡಿಯಿಂದ ಸಿಲುಕಿದ್ದ ಪುರುಷ ಮತ್ತು ಮಹಿಳೆಯನ್ನು ರಕ್ಷಿಸಲಾಗಿತ್ತು. ಅಸ್ವಸ್ಥಗೊಂಡ ಮಹಿಳೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರ ಗುರುತು ಇನ್ನು ಪತ್ತೆಯಾಗಿಲ್ಲ.

ಮಂಡಿ ಜಿಲ್ಲೆಯ ಸುಂದರನಗರದ ಜಂಗಮ್ ಬಾಗ್ ಬಿಬಿಎಂಬಿ ಕಾಲೋನಿ ಬಳಿ ಮಂಗಳವಾರ ಸಂಜೆ ಸಂಭವಿಸಿದ ಭೂಕುಸಿತದಲ್ಲಿ ಇಬ್ಬರು ಮಹಿಳೆಯರು, ಒಂದು ಮಗು ಸೇರಿದಂತೆ ಮೂವರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತರನ್ನು ಭಾರತಿ (28) ಮತ್ತು ಅವರ ಎರಡೂವರೆ ವರ್ಷದ ಮಗು ಕೀರ್ತನ್ ಎಂದು ಗುರುತಿಸಲಾಗಿದೆ. ಮತ್ತೊಬ್ಬರ ಗುರುತು ಇನ್ನೂ ಪತ್ತೆಯಾಗಿಲ್ಲ.

KannadaExpress

Advertisement

ವಾರ್ತಾಪತ್ರಿಕೆ ಚಂದಾದಾರಿಕೆ

ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ

ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ
Get In Touch

Udupi

9985974521

Kannadaexpress@gmail.com

Follow Us
Advertisements

© 2025 KannadaExpress. All Rights Reserved.
Design by GreyCrust Solutions