ಜಮ್ಮುವಿನಲ್ಲಿ ಮಳೆ ಭಾರೀ ಅನಾಹುತ ಸೃಷ್ಟಿಸಿದೆ. ಮಂಗಳವಾರ ಸುರಿದ ರಣಭೀಕರ ಮಳೆಗೆ ಭೂಕುಸಿ, ಮನೆ, ಸೇತುವೆ ಕೊಚ್ಚಿ ಹೋದ ಘಟನೆ ಸಂಭವಿಸಿದ್ದು, ಕನಿಷ್ಟ 32ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.
ಮಳೆಯ ಪರಿಣಾಮ ವೈಷ್ಣೋದೇವಿ ದೇಗುಲಕ್ಕೆ ಹೋಗುವ ಮಾರ್ಗದಲ್ಲಿ ಭೂಕುಸಿತ ಸಂಭವಿಸಿದ್ದು, 9 ಮಂದಿ ಯಾತ್ರಿಕರು ಸೇರಿದಂತೆ ಮಳೆ ಅನಾಹುತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 32ಕ್ಕೆ ಏರಿಕೆಯಾಗಿದೆ.
ವೈಷ್ಣೋದೇವಿ ದೇಗುಲಕ್ಕೆ ಹೋಗುವ ಮಾರ್ಗದಲ್ಲಿ ಭೂಕುಸಿತ ಸಂಭವಿಸಿರುವ ಹಿನ್ನೆಲೆಯಲ್ಲಿ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ರಣ ಮಳೆ ಕೇವಲ ಜಮ್ಮು ಅಷ್ಟೇ ಅಲ್ಲದೆ, ಕಾಶ್ಮೀರ ಕಣಿವೆಯಲ್ಲಿಯೂ ಹಾನಿಯನ್ನುಂಟು ಮಾಡಿದೆ. ಇಲ್ಲಿನ ಸೇತುವೆಗಳು ಕುಸಿದು ಬಿದ್ದಿದ್ದು, ಮೊಬೈಲ್ ಟವರ್‌ಗಳು ಮತ್ತು ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದರಿಂದ ಮೂಲಸೌಕರ್ಯ ತೀವ್ರವಾಗಿ ಹಾನಿಗೊಳಗಾಗಿದೆ ಎಂದು ತಿಳಇದುಬಂದಿದೆ.
ಜಮ್ಮು-ಶ್ರೀನಗರ ಮತ್ತು ಕಿಶ್ತ್ವಾರ್-ದೋಡಾ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚಾರ ಸ್ಥಗಿತಗೊಂಡಿದೆ, ಭೂಕುಸಿತ, ಹಠಾತ್ ಪ್ರವಾಹದಿಂದ ರಸ್ತೆಗಳ ಸಂಚಾರದ ಮೇಲೆ ನಿರ್ಬಂಧಗಳನ್ನು ಹೇರಲಾಗಿದೆ. ಅಲ್ಲದೆ, ಜಮ್ಮುವಿಗೆ ಹೋಗುವ ಮತ್ತು ಅಲ್ಲಿಂದ ಬರುವ ಅನೇಕ ರೈಲುಗಳನ್ನು ರದ್ದುಪಡಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ© 2025 KannadaExpress. All Rights Reserved.
Design by GreyCrust Solutions