Advertisement

ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ವತಿಯಿಂದ ಸಾಧಕರಿಗೆ ಸನ್ಮಾನ

ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಡಾ. ವಾಹಿದ್ ದಾವುದ್ ಶೇಖ್, ಸುಲೇಮಾನ್ ಮೊಹಮದ್ ಬ್ಯಾರಿ ಗುಲ್ವಾಡಿ ಹಾಗೂ ರಾಷ್ಟ್ರೀಯ ಮಾಧ್ಯಮ ರತ್ನ ಪ್ರಶಸ್ತಿ ಪುರಸ್ಕೃತ ಮಹಮ್ಮದ್ ಶರೀಫ್ ಕಾರ್ಕಳ ಅವರನ್ನು ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ವತಿಯಿಂದ ಸನ್ಮಾನಿಸಲಾಯಿತು.

ನಗರದ ನೇಜಾರಿನ ವೈಟ್ ಕಾಟೇಜ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ವಾರ್ಷಿಕ ಅವಲೋಕನ ಸಭೆಯ ಸಂದರ್ಭದಲ್ಲಿ ಈ ಸನ್ಮಾನ ಕಾರ್ಯಕ್ರಮ ನೆರವೇರಿತು. ವಿವಿಧ ಕ್ಷೇತ್ರಗಳಲ್ಲಿ ವಿಶಿಷ್ಟ ಸಾಧನೆಗೈದು ಜಿಲ್ಲೆಯ ಹೆಸರನ್ನು ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಎತ್ತಿಹಿಡಿದಿರುವ ಸಾಧಕರನ್ನು ಗೌರವಿಸುವುದು ನಮ್ಮೆಲ್ಲರ ಹೊಣೆಗಾರಿಕೆ ಎಂದು ಒಕ್ಕೂಟದ ಅಧ್ಯಕ್ಷರಾದ ಮೊಹಮದ್ ಮೌಲಾ ಅಭಿಪ್ರಾಯಪಟ್ಟರು.

ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಡಾ. ವಾಹಿದ್ ದಾವುದ್ ಶೇಖ್ ಅವರು ಸಾಮಾಜಿಕ ಕ್ಷೇತ್ರದಲ್ಲಿ ನೀಡಿದ ಸೇವೆಯನ್ನು ಸ್ಮರಿಸಲಾಯಿತು. ಸುಲೇಮಾನ್ ಮೊಹಮ್ಮದ್ ಬ್ಯಾರಿ ಗುಲ್ವಾಡಿ ಅವರ ಸಮಾಜಮುಖಿ ಕಾರ್ಯಚಟುವಟಿಕೆಗಳು ಹಾಗೂ ಜನಸೇವೆಯ ಬಗ್ಗೆ ವಿವರಿಸಲಾಯಿತು. ರಾಷ್ಟ್ರೀಯ ಮಾಧ್ಯಮ ರತ್ನ ಪ್ರಶಸ್ತಿ ಪುರಸ್ಕೃತ ಮಹಮ್ಮದ್ ಶರೀಫ್ ಕಾರ್ಕಳ ಅವರು ಮಾಧ್ಯಮ ಕ್ಷೇತ್ರದಲ್ಲಿ ಸಾಧಿಸಿದ ಸಾಧನೆಗಳನ್ನು ಮತ್ತು ಸತತ ಎರಡನೇ ಬಾರಿಗೆ ಕಾರ್ಕಳ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ಬಗ್ಗೆ ಪ್ರಸ್ತಾಪಿಸಿ ಅಭಿನಂದಿಸಲಾಯಿತು.

ಸನ್ಮಾನಿತರಿಗೆ ಶಾಲು ಹೊದಿಸಿ, ಫಲಕ ಮತ್ತು ಸ್ಮರಣಿಕೆ ನೀಡಿ ಗೌರವಿಸಲಾಯಿತು. ಪ್ರತಿಕ್ರಿಯೆ ನೀಡಿದ ಸನ್ಮಾನಿತರು, ಈ ಗೌರವವು ಮುಂದಿನ ದಿನಗಳಲ್ಲಿ ಇನ್ನಷ್ಟು ಸೇವೆ ಸಲ್ಲಿಸಲು ಪ್ರೇರಣೆ ನೀಡುತ್ತದೆ ಎಂದು ಕೃತಜ್ಞತೆ ವ್ಯಕ್ತಪಡಿಸಿದರು.

ವೇದಿಕೆಯಲ್ಲಿ ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಮಾಜಿ ಅಧ್ಯಕ್ಷ ಯಾಸೀನ್ ಮಲ್ಪೆ, ಅಶ್ಫಾಕ್ ಕಾರ್ಕಳ ಉಪಾಧ್ಯಕ್ಷರಾದ ರಫೀಕ್ ಬಿಎಸ್ ಎಫ್, ಶಭೀ ಅಹಮದ್ ಖಾಝಿ, ಸಯೀದ್ ಫರೀದ್, ಆಸಿಫ್ ಬೈಕಾಡಿ, ನಾಸೀರ್ ಕಾರ್ಕಳ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಕಟಪಾಡಿ, ಸೇರಿದಂತೆ ಒಕ್ಕೂಟದ ಪದಾಧಿಕಾರಿಗಳು, ಉಪಸ್ಥಿತರಿದ್ದರು. ಸನ್ಮಾನ ಕಾರ್ಯಕ್ರಮವನ್ನು ಮುಷ್ತಾಕ್ ಹೆನ್ನಾಬೈಲ್ ನೆರವೇರಿಸಿದರು.

KannadaExpress

Advertisement

ವಾರ್ತಾಪತ್ರಿಕೆ ಚಂದಾದಾರಿಕೆ

ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ

ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ
Get In Touch

Editor Kannada Express 1st Floor, Raaj Towers Udupi - 576101

+919008424891

Kannadaexpress@gmail.com

Follow Us
Advertisements

© 2025 KannadaExpress. All Rights Reserved.
Design by GreyCrust Solutions