ರಾಜ್ಯದಲ್ಲಿ ದಿನೇ ದಿನೇ ಬಿಸಿಲಿನ ತೀವ್ರತೆ ಹೆಚ್ಚಾಗುತ್ತಿದ್ದು, ಹವಾಮಾನ ಇಲಾಖೆಯು ರಾಜ್ಯ ವಿವಿಧ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಒಣ ಹವೆಯ ಯೆಲ್ಲೋ ಅಲರ್ಟ್ ಅನ್ನು ಘೋಷಣೆ ಮಾಡಿದೆ. ರವಿವಾರದಂದು ಕಲಬುರಗಿಯಲ್ಲಿ ಅತ್ಯಾಧಿಕ ಉಷ್ಣಾಂಶ ದಾಖಲಾಗಿದ್ದು, ಗರಿಷ್ಟ ತಾಪಮಾನವು 41.6 ಸೆಲ್ಸಿಯಸ್‍ಗೆ ಏರಿಕೆಯಾಗಿದೆ.
ಎ.13ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಹಾಸನ, ಮೈಸೂರು ಮತ್ತು ಚಾಮರಾಜನಗರ, ಎ.14ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ, ಎ.15ರಂದು ದಕ್ಷಿಣ ಕನ್ನಡ, ಹಾಸನ, ಮೈಸೂರು, ಚಾಮರಾಜನಗರ, ಬಾಗಲಕೋಟೆ, ಗದಗ ಮತ್ತು ಧಾರವಾಡ, ಎ.16ರಂದು ಉಡುಪಿ, ದಕ್ಷಿಣ ಕನ್ನಡ, ಕೊಡಗು, ಹಾಸನ, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಚಾಮರಾಜನಗರ, ಬಾಗಲಕೋಟೆ, ಗದಗ ಮತ್ತು ಧಾರವಾಡ ಜಿಲ್ಲೆಗಳಿಗೆ ತಾಪಮಾನ ಹೆಚ್ಚಳದ ಯೆಲ್ಲೋ ಅಲರ್ಟ್ ನೀಡಲಾಗಿದೆ.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲEditor Kannada Express 1st Floor, Raaj Towers Udupi - 576101
+919008424891
Kannadaexpress@gmail.com
© 2025 KannadaExpress. All Rights Reserved.
Design by GreyCrust Solutions