ಉಡುಪಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಗ್ರಾಮೀಣ ಪ್ರದೇಶಗಳಲ್ಲಿ ಸ್ವಂತ ನಿವೇಶನವಿಲ್ಲದೆ ವಾಸಿಸುತ್ತಿರುವ ಅರ್ಹ ಬಡ ಕುಟುಂಬಗಳು ಸರ್ಕಾರದಿಂದ ಮಂಜೂರಾಗುವ ನಿವೇಶನ ಸೌಲಭ್ಯ ಪಡೆಯಲು ಕೂಡಲೇ ಅರ್ಜಿ ಸಲ್ಲಿಸುವಂತೆ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಮುಖಂಡ ಹಾಗೂ ಪೆರ್ಡೂರು ಗ್ರಾಮ ಪಂಚಾಯತ್‌ನ ನಿಕಟಪೂರ್ವ ಸದಸ್ಯ ನವೀನ್ ಸಾಲಿಯಾನ್ ಮನವಿ ಮಾಡಿದ್ದಾರೆ.
ಗ್ರಾಮೀಣ ಭಾಗದಲ್ಲಿ ನಿವೇಶನ ರಹಿತ ಕುಟುಂಬಗಳಿಗೆ ನಿವೇಶನ ಒದಗಿಸುವ ಉದ್ದೇಶದಿಂದ ಸರ್ಕಾರ ಈಗಾಗಲೇ ಸರ್ಕಾರಿ ಜಾಗಗಳನ್ನು ಗುರುತಿಸಿದ್ದು, ಈ ತಿಂಗಳ ಅಂತ್ಯದೊಳಗೆ ಅರ್ಹ ಫಲಾನುಭವಿಗಳ ಪಟ್ಟಿಯನ್ನು ಸಿದ್ಧಪಡಿಸುವ ಪ್ರಕ್ರಿಯೆ ನಡೆಯಲಿದೆ. ಆದ್ದರಿಂದ ನಿವೇಶನ ರಹಿತರು ಅಗತ್ಯ ದಾಖಲೆಗಳೊಂದಿಗೆ ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯತ್ ಕಚೇರಿಗೆ ಭೇಟಿ ನೀಡಿ, ಸರ್ಕಾರದ ನಿವೇಶನಕ್ಕಾಗಿ ಕೂಡಲೇ ಅರ್ಜಿ ಸಲ್ಲಿಸಬೇಕು ಎಂದು ಅವರು ತಿಳಿಸಿದ್ದಾರೆ.
ಈ ಯೋಜನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ಸಲ್ಲಿಸುವ ವಿಧಾನದ ಕುರಿತು ತಿಳಿದುಕೊಳ್ಳಲು ತಮ್ಮ ತಮ್ಮ ಗ್ರಾಮ ಪಂಚಾಯತ್ ಕಚೇರಿಗಳನ್ನು ಸಂಪರ್ಕಿಸುವಂತೆ ನವೀನ್ ಸಾಲಿಯಾನ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲEditor Kannada Express 1st Floor, Raaj Towers Udupi - 576101
Kannadaexpress@gmail.com
© 2025 KannadaExpress. All Rights Reserved.
Design by GreyCrust Solutions