ಬೆಂಗಳೂರು: ಪ್ರಬುದ್ಧ ಮತ್ತು ಸಮೃದ್ಧ ಭಾರತ ನಿರ್ಮಾಣವಾಗಬೇಕೆಂದರೆ ಭಾರತದ ಪ್ರತಿ ಪ್ರಜೆಯೂ RSSಗೆ ತಾಕಿದ ಗಾಳಿಯೂ ನಮಗೆ ಸೋಕಬಾರದು“ ಎಂಬ ಪ್ರತಿಜ್ಞೆ ಕೈಗೊಳ್ಳಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆಯವರು ಹೇಳಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಜನಾಂಗೀಯ ದ್ವೇಷ, ವರ್ಣಾಶ್ರಮದ ಕ್ರೌರ್ಯಗಳನ್ನು ಒಳಗೊಂಡ ನಾಜಿವಾದ, ಮನುವಾದಗಳನ್ನೇ ನರ ನಾಡಿ, ರಕ್ತಗಳಲ್ಲಿ ಪ್ರವಾಹಿಸಿಕೊಂಡಿರುವ RSS ಎಂಬ ವಿಷಕಾರಿ ಸಂಘಟನೆಯನ್ನು ಕಾಂಗ್ರೆಸ್ ಪಕ್ಷವು ಎಂದಿಗೂ ಶತ್ರುವಾಗಿಯೇ ನೋಡುತ್ತದೆ. ಏಕೆಂದರೆ, ಆರ್ಎಸ್ಎಸ್ ಸಂವಿಧಾನಕ್ಕೆ ಶತ್ರು, ಆರ್ಎಸ್ಎಸ್ ಐಕ್ಯತೆಗೆ ಶತ್ರು, ಆರ್ಎಸ್ಎಸ್ ರಾಷ್ಟ್ರಧ್ವಜಕ್ಕೆ ಶತ್ರು, ಆರ್ಎಸ್ಎಸ್ ರಾಷ್ಟ್ರಗೀತೆಗೆ ಶತ್ರು, ಆರ್ಎಸ್ಎಸ್ ಏಕತೆಗೆ, ಸಾರ್ವಭೌಮತೆಗೆ ಶತ್ರು ಎಂದು ಹೇಳಿದ್ದಾರೆ.
ಬಾಬಾ ಸಾಹೇಬರು, ಸರ್ದಾರ್ ಪಟೇಲರು ದಶಕಗಳ ಹಿಂದೆಯೇ ಆರ್ಎಸ್ಎಸ್ ಕುರಿತು ನಿಷ್ಠುರವಾಗಿ ಎಚ್ಚರಿಕೆಯ ಸಂದೇಶ ನೀಡಿ ಹೋಗಿದ್ದಾರೆ, ಆ ಮಹನೀಯರ ಸಂದೇಶವನ್ನು ಗಂಭೀರವಾಗಿ ಪರಿಗಣಿಸಿ ಮನುವಾದಿಗಳನ್ನು ದೂರ ಇಡಬೇಕಿದೆ. ಬ್ರಿಟಿಷರೊಂದಿಗೆ ಕೈಜೋಡಿಸಿ ಭಾರತ ವಿರೋಧಿಯಾಗಿ ನಡೆದುಕೊಂಡಿದ್ದ ಆರ್ಎಸ್ಎಸ್ ಸ್ವತಂತ್ರಾನಂತರ ಐಕ್ಯತೆಯ ವಿರೋಧಿ ಚಟುವಟಿಕೆಗಳನ್ನು ಇನ್ನಷ್ಟು ಹೆಚ್ಚಿಸಿತು. ಸಂಘ ಪರಿವಾರದ ಅಪಾಯವನ್ನು ಅಂದೇ ಊಹಿಸಿದ ಸರ್ದಾರ್ ಪಟೇಲರು ನಿಷೇಧ ಹೇರಿದ್ದರು.
ನಮ್ಮ ದೇಶದಲ್ಲಿ ದ್ವೇಷ ಮತ್ತು ಹಿಂಸಾಚಾರದ ಶಕ್ತಿಗಳನ್ನು ಬೇರುಸಹಿತ ನಿರ್ಮೂಲನೆ ಮಾಡಬೇಕಿದೆ, ಮತ್ತು ರಾಷ್ಟ್ರದ ಸ್ವಾತಂತ್ರ್ಯವನ್ನು ಅಪಾಯಕ್ಕೆ ಸಿಲುಕಿಸಲು ಮತ್ತು ದೇಶದ ಹೆಸರನ್ನು ಕಳೆಗುಂದಿಸಲು ಕೆಲಸ ಮಾಡುತ್ತಿರುವ ಆರ್‌ಎಸ್‌ಎಸ್ ಅನ್ನು ನಿಷೇಧಿಸುತ್ತಿದ್ದೇವೆ.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ© 2025 KannadaExpress. All Rights Reserved.
Design by GreyCrust Solutions