ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ಮತದಾರರಾದ ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳು, ಪರಿಶಿಷ್ಟ ಜಾತಿ–ಪಂಗಡಗಳು, ರೈತರು ಹಾಗೂ ಬಡವರ ಮತಗಳನ್ನು ಮತದಾರರ ಪಟ್ಟಿಯಿಂದ ಅಳಿಸುವ ಮೂಲಕ ಬಿಜೆಪಿ ನಾಯಕರು ಮತ ಕಳ್ಳತನಕ್ಕೆ ಮುಂದಾಗಿದ್ದಾರೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಅಧ್ಯಕ್ಷ ಹಾಗೂ ಉಡುಪಿ ನಗರಸಭೆ ನಾಮನಿರ್ದೇಶಿತ ಸದಸ್ಯ ಸುರೇಶ್ ಶೆಟ್ಟಿ ಬನ್ನಂಜೆ ಆರೋಪಿಸಿದ್ದಾರೆ.
ಮತದಾರರ ಹಕ್ಕಿನ ರಕ್ಷಣೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಚಿವ ಸಂಪುಟದ ಸಹೋದ್ಯೋಗಿಗಳೊಂದಿಗೆ ಚುನಾವಣಾ ಆಯೋಗದ ಮುಖ್ಯಸ್ಥರನ್ನು ಭೇಟಿಯಾಗಿ ಮನವಿ ಸಲ್ಲಿಸಿರುವುದು ಮಹತ್ವದ ಬೆಳವಣಿಗೆ. ಎಲ್ಲ ಅರ್ಹ ಮತದಾರರಿಗೂ ಮತದಾನದ ಹಕ್ಕು ದೊರೆಯುವಂತೆ ಅವರು ಒತ್ತಾಯಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಡಿ.ಕೆ. ಶಿವಕುಮಾರ್ ಅವರ ಈ ಹೋರಾಟದಿಂದ ಬಿಜೆಪಿ ಹಾಗೂ ಜೆಡಿಎಸ್ ನಾಯಕರಿಗೆ ಅನಿರೀಕ್ಷಿತ ಹೊಡೆತ ಬಿದ್ದಿದ್ದು, ಅದಕ್ಕಾಗಿ ಕಾಂಗ್ರೆಸ್ ಮತ್ತು ಶಿವಕುಮಾರ್ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಸುರೇಶ್ ಶೆಟ್ಟಿ ಬನ್ನಂಜೆ ದೂರಿದ್ದಾರೆ.
ಮುಂದಿನ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಅಧಿಕಾರಕ್ಕೆ ಬರದಂತೆ ಮತದಾರರು ಎಚ್ಚರಿಕೆಯಿಂದ ತಮ್ಮ ಹಕ್ಕು ಚಲಾಯಿಸಬೇಕು. ಮತದಾರರ ಹಕ್ಕಿನ ರಕ್ಷಣೆಗೆ ಕಾಂಗ್ರೆಸ್ ಪಕ್ಷ ನಿರಂತರವಾಗಿ ಹೋರಾಟ ನಡೆಸಲಿದೆ ಎಂದು ಅವರು ಹೇಳಿದ್ದಾರೆ.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲEditor Kannada Express 1st Floor, Raaj Towers Udupi - 576101
Kannadaexpress@gmail.com
© 2025 KannadaExpress. All Rights Reserved.
Design by GreyCrust Solutions