ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಭವನ ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮವು ಕಾರ್ಕಳ ತಾಲೂಕಿನ ಕಾಬೆಟ್ಟುವಿನಲ್ಲಿ ಫೆಬ್ರವರಿ 25 ರಂದು ಬೆಳಿಗ್ಗೆ 11.30 ಕ್ಕೆ ನಡೆಯಲಿದೆ.
ಕಾರ್ಯಕ್ರಮವನ್ನು ಕರ್ನಾಟಕ ಸರ್ಕಾರದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷಿö್ಮÃ ಆರ್. ಹೆಬ್ಬಾಳ್ಕರ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಹೆಚ್.ಸಿ ಮಹದೇವಪ್ಪ ಉಪಸ್ಥಿತರಿರಲಿದ್ದು, ಶಾಸಕ ವಿ.ಸುನೀಲ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ.
ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಬಿ.ವೈ ರಾಘವೇಂದ್ರ, ಶಾಸಕರುಗಳಾದ ಯಶ್ ಪಾಲ್ ಎ.ಸುವರ್ಣ, ಗುರುರಾಜ್ ಶೆಟ್ಟಿ ಗಂಟಿಹೊಳೆ, ಎ. ಕಿರಣ್ ಕುಮಾರ್ ಕೊಡ್ಗಿ ಹಾಗೂ ಗುರ್ಮೆ ಸುರೇಶ್ ಶೆಟ್ಟಿ, ವಿಧಾನಪರಿಷತ್ ಶಾಸಕರುಗಳಾದ ಎಸ್.ಎಲ್. ಭೋಜೇಗೌಡ, ಮಂಜುನಾಥ್ ಭಂಡಾರಿ, ಡಾ. ಧನಂಜಯ ಸರ್ಜಿ ಹಾಗೂ ಕಿಶೋರ್ ಕುಮಾರ್ ಪುತ್ತೂರು, ಕರಾವಳಿ ಅಭಿವೃದ್ದಿ ಮಂಡಳಿಯ ಅಧ್ಯಕ್ಷ ಎಂ.ಎ.ಗಫೂರ್, ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲEditor Kannada Express 1st Floor, Raaj Towers Udupi - 576101
+919008424891
Kannadaexpress@gmail.com
© 2025 KannadaExpress. All Rights Reserved.
Design by GreyCrust Solutions