Advertisement

ಸಂತ್ರಸ್ತ ಮಕ್ಕಳಿಗೆ ಬೆಂಬಲ ವ್ಯಕ್ತಿಗಳಾಗಿ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ

ಪೋಕ್ಸೋ ಕಾಯಿದೆಯಡಿ ಸಂತ್ರಸ್ತ ಮಕ್ಕಳಿಗೆ ಬೆಂಬಲ ವ್ಯಕ್ತಿಗಳಿಗಾಗಿ ಸೇವೆ ಸಲ್ಲಿಸಲು ಮಕ್ಕಳೊಂದಿಗೆ ಕೆಲಸ ಮಾಡುವ ಮೂಲಕ ಮಕ್ಕಳ ಶಿಕ್ಷಣ, ಅಭಿವೃದ್ಧಿ ಅಥವಾ ರಕ್ಷಣಾ ವಿಷಯದಲ್ಲಿ ಕನಿಷ್ಟ 3 ವರ್ಷಗಳ ಅನುಭವದೊಂದಿಗೆ ಪದವಿ ಅಥವಾ ಸಮಾಜ ಕಾರ್ಯ/ಸೋಷಿಯೋಲಾಜಿ/ಸೈಕೋಲಾಜಿ/ಚೈಲ್ಡ್ ಡೆವಲಪ್‌ಮೆಂಟ್ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಹೊಂದಿರುವ ಅಥವಾ ಮಕ್ಕಳ ಆರೈಕೆ ಕೇಂದ್ರದಲ್ಲಿ ಮಕ್ಕಳೊಂದಿಗೆ ಕೆಲಸ ಮಾಡುವ ಅಧಿಕಾರಿಗಳು ಮತ್ತು ಮಕ್ಕಳ ಹಕ್ಕುಗಳ ಕ್ಷೇತ್ರದಲ್ಲಿ ಕೆಲಸ ಮಾಡುವ ಯಾವುದೇ ಸಂಸ್ಥೆ ಕೂಡ ಅರ್ಜಿ ಸಲ್ಲಿಸಬಹುದಾಗಿದೆ

ಪ್ರತಿ ಪ್ರಕರಣಕ್ಕೆ 3000 ರೂ. ಸಂಭಾವನೆ ನೀಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಕ್ಷೇತ್ರ ಕಾರ್ಯವನ್ನು ಮಾಡಲು ಮತ್ತು ಅಪರಾಧ ನ್ಯಾಯ ವ್ಯವಸ್ಥೆಯ ಮೂಲಕ ಮಕ್ಕಳು ಮತ್ತು ಅವರ ಕುಟುಂಬಗಳಿಗೆ ಸಹಾಯ ಮಾಡಲು ತರಬೇತಿ ನೀಡಲಾಗುವುದು.

ಅರ್ಜಿ ಸಲ್ಲಿಸಲು ಜುಲೈ 29 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಛೇರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಬಿ ಬ್ಲಾಕ್, ಒಂದನೇ ಮಹಡಿ, ಜಿಲ್ಲಾಧಿಕಾರಿಗಳ ಕಛೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 0820-2574964 ಅನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

KannadaExpress

Advertisement

ವಾರ್ತಾಪತ್ರಿಕೆ ಚಂದಾದಾರಿಕೆ

ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ

ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ
Get In Touch

Udupi

9985974521

Kannadaexpress@gmail.com

Follow Us
Advertisements

© 2025 KannadaExpress. All Rights Reserved.
Design by GreyCrust Solutions