ಕಾಪು: ಕಾರೊಂದು ಪಲ್ಟಿಯಾದ ಪರಿಣಾಮ ಓರ್ವ ಮೃತಪಟ್ಟು ಮೂವರು ತೀವ್ರ ಗಾಯಗೊಂಡ ಘಟನೆ ಮೂಳೂರು ಸಮೀಪದ ಹಳ್ಳಿ ಮನೆ ಹೋಟೆಲ್ ಎದುರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಶನಿವಾರ ನಸುಕಿನ ವೇಳೆ 3 ಗಂಟೆ ಸುಮಾರಿಗೆ ನಡೆದಿದೆ.
ಮೃತರನ್ನು ಬೆಳ್ಮಣ್ ನ ಮಾರ್ವಿನ್ ಮೆಂಡೊನ್ಸಾ ಎಂದು ಗುರುತಿಸಲಾಗಿದೆ. ಸಿನಿಮಾಟೋಗ್ರಾಫರ್ ಆಗಿದ್ದ ಮರ್ವಿನ್ ಡಿ ಜೆ ವೃತ್ತಿಯನ್ನು ಮಾಡುತ್ತಿದ್ದರು. ಗಾಯಾಳುಗಳಾದ ಕಾರು ಚಾಲಕ ಅಂಬಲಪಾಡಿಯ ಪ್ರಜ್ವಲ್, ಕಾರ್ಕಳದ ಪ್ರಸಾದ್ ಮತ್ತು ವಿಘ್ನೇಶ್ ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇವರು ಕಾರಿನಲ್ಲಿ ಅಂಬಲಪಾಡಿಯಿಂದ ಬೆಳ್ಮಣ್ ಗೆ ಹೋಗುತ್ತಿದ್ದಾಗ ನಾಯಿಯೊಂದು ಕಾರಿಗೆ ಅಡ್ಡ ಬಂದಿದೆ ಎನ್ನಲಾಗಿದೆ. ಇದರ ಪರಿಣಾಮ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಆಗಿದೆ ಎಂದು ತಿಳಿದು ಬಂದಿದೆ.
ಅಪಘಾತದಿಂದ ಕಾರು ಸಂಪೂರ್ಣ ಜಖಂಗೊಂಡಿದೆ. ತಕ್ಷಣ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಉಚ್ಚಿಲ ಹಾಗೂ ಮೂಳೂರಿನ ಎಸ್‌ಡಿಪಿಐ ಆಂಬುಲೆನ್ಸ್ ಗಳು ಗಾಯಾಳುಗಳನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ಸಾಗಿಸಿ ದಾಖಲಿಸಿದೆ. ಗಂಭೀರವಾಗಿ ಗಾಯಗೊಂಡಿದ್ದ ಮಾರ್ವೀನ್ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು ಎಂದು ತಿಳಿದು ಬಂದಿದೆ
ಆಂಬುಲೆನ್ಸ್ ಚಾಲಕರದ ಕೆ.ಎಂ.ಸಿರಾಜ್, ಹಮೀದ್ ಹಾಗೂ ಸಾಮಾಜಿಕ ಕಾರ್ಯಕರ್ತ ಜಮಾಲುದ್ದೀನ್ ಉಚ್ಚಿಲ ಸಹಕರಿಸಿದ್ದಾರೆ. ಸ್ಥಳಕ್ಕೆ ಕಾಪು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ© 2025 KannadaExpress. All Rights Reserved.
Design by GreyCrust Solutions