Advertisement

ಕಾಪು | ಪಂಚಾಯತ್ ಚುನಾವಣೆ ಫಲಿತಾಂಶ ಸರ್ಕಾರಕ್ಕೆ ಶಕ್ತಿವರ್ಧಕವಾಗಬೇಕು : ವಿನಯ್ ಕುಮಾರ್ ಸೊರಕೆ

ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ಗಳ ಸಮರ್ಪಕ ಅನುಷ್ಠಾನದಿಂದ ಕೋಟ್ಯಂತರ ಜನರಿಗೆ ಅನುಕೂಲವಾಗಿದ್ದು, ಸರ್ಕಾರದ ಪರ ಜನಾಭಿಪ್ರಾಯ ಸಕರಾತ್ಮಕವಾಗಿದೆ, ಇದರ ಲಾಭವನ್ನು ಮುಂಬರುವ ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್ ಅಥವಾ ಜಿಲ್ಲಾ ಪಂಚಾಯತ್ ಚುನಾವಣೆ ಗಳಲ್ಲಿ ಸಂಪೂರ್ಣವಾಗಿ ಪಡೆದು ಕೊಳ್ಳಲು ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು, ಅದು ಸರ್ಕಾರದ ಜನಪರ ಆಡಳಿತಕ್ಕೆ ಶಕ್ತಿವರ್ಧಕ ವಾಗಿ ಪರಿಣಮಿಸುವಂತಾಗ ಬೇಕು ಎಂದು ಕೆ. ಪಿ. ಸಿ. ಸಿ ಪ್ರಚಾರ ಸಮಿತಿಯ ರಾಜ್ಯಾಧ್ಯಕ್ಷರು ಹಾಗೂ ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆಯವರು ಕಾರ್ಯಕರ್ತರಿಗೆ ಕರೆ ನೀಡಿದರು.

ಅವರು, ಇಂದು ಕಾಪು ರಾಜೀವ್ ಭವನದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡುತ್ತಾ, ಬೂತ್ ಮಟ್ಟದಲ್ಲಿ ಪಕ್ಷದ ಸಂಘಟನೆಯನ್ನು ಇನ್ನಷ್ಟು ಬಲಿಷ್ಠಗೊಳಿಸಬೇಕು, ಕಾರ್ಯಕರ್ತರ ಮತ್ತು ಪಕ್ಷದ ಮುಖಂಡರ ಸಾಂಘಿಕ ಪ್ರಯತ್ನ ದಿಂದ ವಿರೋಧ ಪಕ್ಷವನ್ನು ಹಿಮ್ಮೆಟ್ಟಿಸುವ ಎಲ್ಲ ಪ್ರಯತ್ನಗಳು ಪರಿಣಾಮಕಾರಿಯಾಗಿ ನಡೆಯಬೇಕು. ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ವಿಪಕ್ಷಗಳ ಯಾವುದೇ ರೀತಿಯ ಆಸೆ -ಆಮಿಷಗಳಿಗೆ ಬಲಿಯಾಗದೆ, ಯಾವುದೇ ರೀತಿಯಲ್ಲಿ ಸ್ಥಳೀಯ ಮಟ್ಟದಲ್ಲಿ ಹೊಂದಾಣಿಕೆ ರಾಜಕೀಯ ಮಾಡದೆ, ಬದ್ಧತೆ ಮತ್ತು ಪ್ರಾಮಾಣಿಕತೆಯಿಂದ ಚುನಾವಣಾ ಕಾರ್ಯ ನಿರ್ವಹಿಸಿದಲ್ಲಿ ಕಾಂಗ್ರೆಸ್ ಪಕ್ಷವು ಜಯಭೇರಿ ಬಾರಿಸುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದರು.

ಕಾಂಗ್ರೆಸ್ ಪಕ್ಷವು ಬಿ.ಜೆ.ಪಿಯ 'ವೋಟ್ ಚೋರಿ ' ವಿರುದ್ಧ ದೇಶದಾಡ್ಯಂತ ನಡೆಸುತ್ತಿರುವ, "ಸಹಿ ಸಂಗ್ರಹ ಅಭಿಯಾನ " ಕ್ಕೆ ಉತ್ತಮ ಪ್ರತಿಕ್ರಿಯೆ ದೊರಕುತ್ತಿದ್ದು, ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ 15.000 ಕ್ಕೂ ಮಿಕ್ಕಿ ಸಹಿ ಸಂಗ್ರಹಿಸಿ ಕೆ.ಪಿ.ಸಿ.ಸಿಗೆ ಕಳುಹಿಸಿ ಕೊಟ್ಟಿರುವ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು. ಮುಂದುವರಿದು, ಇದೇ ತಿಂಗಳ ಕೊನೆಯ ವಾರದಿಂದ ಬ್ಲಾಕ್ ವ್ಯಾಪ್ತಿಯ ಎಲ್ಲ ಬೂತ್ ಸಮಿತಿಗಳಿಗೆ ಭೇಟಿ ನೀಡಿ ಕಾರ್ಯಕರ್ತರನ್ನು ಪಂಚಾಯತ್ ಚುನಾವಣೆಗೆ ಸಜ್ಜುಗೊಳಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದರು.

ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಕಾಪು ದಿವಾಕರ್ ಶೆಟ್ಟಿ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ನವೀನ್ ಚಂದ್ರ ಸುವರ್ಣ ಮಾತನಾಡಿ ಪಕ್ಷದ ಕಾರ್ಯಕ್ರಮಗಳ ಬಗ್ಗೆ ಸಲಹೆ - ಸೂಚನೆ ನೀಡಿದರು.

ಕೆ.ಪಿ.ಸಿ.ಸಿ ಸಂಯೋಜಕರಾದ ನವೀನ್ ಚಂದ್ರ ಜೆ. ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಶರ್ಫುದ್ದೀನ್ ಶೇಖ್, ಜಿಲ್ಲಾ ಸೇವಾದಳದ ಅಧ್ಯಕ್ಷ ರಾದ ಕಿಶೋರ್ ಎರ್ಮಾಳ್, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿ ರಾಜೇಶ್ ರಾವ್ ಪಾಂಗಾಳ, ಅಬ್ದುಲ್ ಹಮೀದ್, ಮತ್ತಿತರರ ಪ್ರಮುಖರು, ಪುರಸಭೆಯ ಸದಸ್ಯರು, ಗ್ರಾಮ ಪಂಚಾಯತ್ ಸದಸ್ಯರು, ಮಾಜಿ ಜಿಲ್ಲಾ ಪಂಚಾಯತ್ / ತಾಲೂಕು ಪಂಚಾಯತ್ ಸದಸ್ಯರು, ಬ್ಲಾಕ್ ಪದಾಧಿಕಾರಿಗಳು, ವಿವಿಧ ಘಟಕಗಳ ಅಧ್ಯಕ್ಷರು / ಪದಾಧಿಕಾರಿಗಳು, ಗ್ರಾಮೀಣ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರುಗಳು, ಬೂತ್ ಅಧ್ಯಕ್ಷರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಅಧ್ಯಕ್ಷತೆ ವಹಿಸಿದ್ದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವೈ. ಸುಕುಮಾರ್ ರವರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಬ್ಲಾಕ್ ಪ್ರಧಾನ ಕಾರ್ಯದರ್ಶಿ ಅಮೀರ್ ಮೊಹಮ್ಮದ್ ವಂದಿಸಿದರು.

KannadaExpress

Advertisement

ವಾರ್ತಾಪತ್ರಿಕೆ ಚಂದಾದಾರಿಕೆ

ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ

ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ
Get In Touch

Editor Kannada Express 1st Floor, Raaj Towers Udupi - 576101

+919008424891

Kannadaexpress@gmail.com

Follow Us
Advertisements

© 2025 KannadaExpress. All Rights Reserved.
Design by GreyCrust Solutions