ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ಕಾಪು ಬಸ್ ನಿಲ್ದಾಣದ ಬಳಿ ಸೆಪ್ಟಂಬರ್ 13 ರಂದು ರಾತ್ರಿ 9 ಗಂಟೆಯ ಸುಮಾರಿಗೆ ಅಂದಾಜು 50-60 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತ ದೇಹ ಪತ್ತೆಯಾಗಿದ್ದು, ಮೃತ ವ್ಯಕ್ತಿಯು ಸಾಧಾರಣ ಶರೀರ, ಗೋಧಿ ಮೈಬಣ್ಣ ಹೊಂದಿದ್ದು, ಮೂಗಿನ ಎಡಬದಿಯಲ್ಲಿ ಕಪ್ಪು ಎಳ್ಳು ಮಚ್ಚೆ ಹೊಂದಿದ್ದಾರೆ.
ಮೃತ ದೇಹವನ್ನು ಅಜ್ಜರಕಾಡಿನ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು, ಮೃತ ವ್ಯಕ್ತಿಯ ವಾರಸುದಾರರು ಯಾರಾದರೂ ಇದ್ದಲ್ಲಿ ಕಾಪು ಪೊಲೀಸ್ ಠಾಣೆ ದೂ.ಸಂ: 0820-2551033, ಕಾಪು ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 0820-2572333, ಪೊಲೀಸ್ ಉಪಾಧೀಕ್ಷಕರ ಕಚೇರಿ ದೂ.ಸಂಖ್ಯೆ: 08258-231333, ಪೊಲೀಸ್ ಅಧೀಕ್ಷಕರ ಕಚೇರಿ ದೂ.ಸಂಖ್ಯೆ: 0820-2534777 ಹಾಗೂ ಜಿಲ್ಲಾ ನಿಸ್ತಂತು ಕೊಠಡಿ ದೂ.ಸಂಖ್ಯೆ: 0820-2520444 ಅನ್ನು ಸಂರ್ಕಿಸಬಹುದಾಗಿದೆ ಎಂದು ಕಾಪು ಪೊಲೀಸ್ ಠಾಣಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ© 2025 KannadaExpress. All Rights Reserved.
Design by GreyCrust Solutions