ಜಮೀಯ್ಯತುಲ್ ಫಲಾಹ್ ಉಡುಪಿ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಖತೀಬ್ ಅಬ್ದುಲ್ ರಶೀದ್ ಮಲ್ಪೆ ಆಯ್ಕೆಯಾಗಿದ್ದಾರೆ. ಜಮೀಯ್ಯತುಲ್ ಫಲಾಹ್ ಉಡುಪಿ ತಾಲೂಕು ಘಟಕದ ಮಹಾ ಸಭೆಯು ಇತ್ತೀಚಗೆ ಸಂಸ್ಥೆಯ ಕಚೇರಿಯಲ್ಲಿ ನಡೆಯಿತು. ಕುಂದಾಪುರದ ಅಬ್ದುಲ್ ಸಲಾಂ ಚಿತ್ತೂರು ಮತ್ತು ಅಸ್ಲಾಂ ಹೈಕಾಡಿ ಈ ಸಭೆಯಲ್ಲಿ ಚುನಾವಣಾ ವೀಕ್ಷಕರಾಗಿ ಆಗಮಿಸಿ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಖತೀಬ್ ಅಬ್ದುಲ್ ರಶೀದ್ ಮಲ್ಪೆಯವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರುಗಳಾಗಿ ವಿ. ಎಸ್.ಉಮರ್ ಮತ್ತು ಮುಷಿರ್ ಶೇಖ್, ಕಾರ್ಯದರ್ಶಿಯಾಗಿ ಸಮೀರ್ ಮಹಮ್ಮದ್, ಜತೆ ಕಾರ್ಯದರ್ಶಿಯಾಗಿ ನಾಸಿರ್ ಯಾಕೂಬ್ ಕುಕ್ಕಿಕಟ್ಟೆ ಖಜಾಂಜಿ ಯಾಗಿ ನಝೀರ್ ನೇಜಾರ್, ಸಂಘಟನಾ ಕಾರ್ಯದರ್ಶಿಯಾಗಿ ಫಾಜಿಲ್ ಆದಿ ಉಡುಪಿ ಮತ್ತು ಪತ್ರಿಕಾ ಕಾರ್ಯದರ್ಶಿಯಾಗಿ ರಿಯಾಝ್ ಅಹಮದ್ ಕುಕ್ಕಿಕಟ್ಟೆ ಅವಿರೋಧವಾಗಿ ಆಯ್ಕೆಯಾದರು. ಸಭೆಯ ಅಧ್ಯಕ್ಷತೆಯನ್ನು ಸಮೀರ್ ಮಹಮ್ಮದ್ ವಹಿಸಿದ್ದರು. ಈ ಸಂದರ್ಭದಲ್ಲಿ 2025-27 ನೆ ಸಾಲಿಗೆ 21 ಜನ ಕಾರ್ಯಕಾರಿ ಸಮಿತಿಯ ಸದಸ್ಯರನ್ನು ಆಯ್ಕೆ ಮಾಡಲಾಯಿತು.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ© 2025 KannadaExpress. All Rights Reserved.
Design by GreyCrust Solutions